ಹಾಸನಾಂಬ ಯಶಸ್ಸಿಗೆ ಸಹಕರಿಸಲು ಮನವಿ

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವದ ಯಶಸ್ಸ್ವಿಸಿಗೆ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸತ್ಯಭಾಮ ಸೂಚಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಇಂದು ನಡೆದ ಹಾಸನಾಂಬ ಜಾತ್ರಾ ಮಹೊತ್ಸವದ ಸಂಬಂದ ಕೈಗೊಂಡಿರುವ ಪೂರ್ವ ಸಿದ್ದತೆ ಬಗ್ಗೆ ಸಭೆ ನಡೆಸಿ ಮಾತನಾಡಿದರು. ಶಕ್ತಿ ಯೋಜನೆ ಜಾರಿಯಲ್ಲಿವ ಕಾರಣ ಜಿಲ್ಲೆಯ ವಿವಿಧ ಭಾಗಗಳಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರವಹಿಸಬೇಕು ಎಂದರು.
ದೇವರ ದರ್ಶನಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ೮ ಕಡೆಗಳಲ್ಲಿ ತಾತ್ಕಾಲಿಕವಾಗಿ ನಿರ್ಮಿಸುವ ಒಟ್ಟು ೫೦ ಶೌಚಾಲಯಗಳ ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಬೇಕು ಎಂದರಲ್ಲದೆ, ಕುಡಿಯುವ ನೀರು ಒದಗಿಸಲು ಕ್ರಮವಹಿಸುವಂತೆ ತಿಳಿಸಿದರು.
ಆಹ್ವಾನ ಪತ್ರಿಕೆ, ಪೂಜಾ ವೇಳಾ ಪಟ್ಟಿ, ಲಾಡು ಪ್ರಸಾದ, ದೀಪಾಲಂಕಾರ, ಪ್ರಸಾದ ವಿತರಣೆ, ಹೂವಿನ ಅಲಂಕಾರ, ಬ್ಯಾರಿಕೇಡ್, ಸಿ.ಸಿ.ಟಿ.ವಿ. ಅಳವಡಿಕೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಆಗ್ನಿ ಶಾಮಕ ವಾಹನ ಹಾಗೂ ಅಂಬುಲೆನ್ಸ್ ವ್ಯವಸ್ಥೆ, ದೇವರ ಪೂಜೆಯನ್ನು ಸಾರ್ವಜನಿಕರು ವೀಕ್ಷಣೆ ಮಾಡಲು ಅನುಕೂಲವಾಗುವಂತೆ ನೇರ ಪ್ರಸಾರಕ್ಕೆ ಎಲ್.ಇ.ಡಿ. ಪರದೆ ವ್ಯವಸ್ಥೆ, ಜಾತ್ರಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಗುರುತಿನ ಚೀಟಿ ವಿತರಣೆಗೆ ಕ್ರಮವಹಿಸಲು ಸೂಚಿಸಿದರು.
ದೇವರ ದರ್ಶನಕ್ಕಾಗಿ ವಿತರಿಸುವ ರೂ.೩೦೦ ರೂ.೧೦೦೦ ಪಾಸ್ ಹಾಗೂ ವಿ.ವಿ.ಐ.ಪಿ ಪಾಸ್‌ಗಳಿಗೆ ಬಾರ್ ಕೋಡ್ ಅಳವಡಿಸಲಾಗುವುದು ಈ ಪಾಸ್‌ಗಳನ್ನು ಸ್ಕಾö್ಯನ್ ಮಾಡಿದ ನಂತರ ಪ್ರವೇಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಅವರು ಮಾತನಾಡಿ ಬಂದುಬಸ್ತ್ಗೆ ಸಂಬAದಿಸಿದAತೆ ರೂಟ್ ಮ್ಯಾಪ್ ತಯಾರಿಸಿಕೊಂಡು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಬಿ.ಆರ್.ಪೂರ್ಣಿಮ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿ ಮಾರುತಿ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಸಭೆಯ ನಂತರ ಜಿಲ್ಲಾಧಿಕಾರಿ ಸತ್ಯಭಾಮ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಸಿದ್ದತೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿ ಮಾರುತಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು.