14.6 C
Munich
Home News ತಾಯ್ನಾಡಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ: ಅದ್ದೂರಿ ಸ್ವಾಗತ, ಪ್ರಧಾನಿ ಮೋದಿ ಭೇಟಿ ಸಾಧ್ಯತೆ

ತಾಯ್ನಾಡಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ: ಅದ್ದೂರಿ ಸ್ವಾಗತ, ಪ್ರಧಾನಿ ಮೋದಿ ಭೇಟಿ ಸಾಧ್ಯತೆ

ನವದೆಹಲಿ: ಅಮೆರಿಕದಿಂದ ಮಧ್ಯರಾತ್ರಿ ೧:೩೦ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾ ಗಾಂಧಿ ಏರ್‌ಪೋರ್ಟ್ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಯ್ನಾಡಿಗೆ ಮರಳಿದ್ದಾರೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶುಭಾಂಶು ಶುಕ್ಲಾ ಅವರನ್ನು ಬರಮಾಡಿಕೊಂಡರು. ಶುಕ್ಲಾ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ, ತಮ್ಮ ತವರು ಲಖನೌಗೆ ಪ್ರಯಾಣಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆಕ್ಸಿಯA-೪ ಮಿಷನ್‌ಗಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ, ೨೦೨೭ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.

error: Content is protected !!