ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಆ. 18ರ ಸೋಮವಾರ ಸಕಲೇಶಪುರ, ಬೇಲೂರು ತಾಲ್ಲೂಕು ಹಾಗೂ ಆಲೂರಿನ ಕೆ. ಹೊಸಕೋಟೆ ಹೋಬಳಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಆದೇಶಿಸಿದ್ದಾರೆ.
ಮಲೆನಾಡಿನ ವಿವಿಧಡೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ಘೋಷಿಸುವಂತೆ ಕೋರಿದ್ದರು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿ ಅವರು ಅಂಗನವಾಡಿ, ಪ್ರಾಥಮಿಕ ಹಾಗು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಈ ರಜೆ ಅವಧಿಗಳನ್ನು ಪ್ರಸಕ್ತ ಶೈಕ್ಷಣಿಕ ಅವಧಿಯ ರಜಾ ದಿನಗಳಲ್ಲಿ (ಶನಿವಾರ, ಭಾನುವಾರ) ಸರಿದೂಗಿಸುವಂತೆ ಅವರು ತಿಳಿಸಿದ್ದಾರೆ.










