ಹಾಸನ: ಬೇಲೂರು ತಾಲ್ಲೂಕಿನ ಚಂದನಹಳ್ಳಿ ಗ್ರಾಮದ ಬಳಿ ರಾತ್ರಿ ವೇಳೆ ದುರ್ಘಟನೆಯೊಂದರಲ್ಲಿ ಕಾರು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶ್ವೇತಾ (29) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಾರನ್ನು ಚಲಾಯಿಸುತ್ತಿದ್ದ ಶ್ವೇತಾಳ ಸ್ನೇಹಿತ ರವಿ, ಕಾರಿನ ಬಾಗಿಲು ತೆರೆದು ಈಜಿ ದಡ ಸೇರಿ ಜೀವ ಉಳಿಸಿಕೊಂಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿ ಶ್ವೇತಾಳ ಶವವನ್ನು ಹೊರತೆಗೆದಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಂದನಹಳ್ಳಿ ಕೆರೆ ಏರಿಯ ಮೇಲೆ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿರುವುದಾಗಿ ತಿಳಿದುಬಂದಿದೆ. ತನಿಖೆ ಮುಂದುವರೆದಿದ್ದು, ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.










