ಅರಕಲಗೂಡು: ಶಾಂತಿಯುತ ಗಣೇಶೋತ್ಸವಕ್ಕೆ ಅರಕಲಗೂಡು ತಹಶೀಲ್ದಾರ್ ಕೆ.ಸಿ. ಸೌಮ್ಯ ಸೂಚನೆ3. ಶಾಂತಿಯುತ ಗಣೇಶೋತ್ಸವಕ್ಕೆ ಅರಕಲಗೂಡು ತಹಶೀಲ್ದಾರ್ ಕೆ.ಸಿ. ಸೌಮ್ಯ ಸೂಚನೆ ತಾಲ್ಲೂಕಿನಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಆಚರಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ತಹಸೀಲ್ದಾರ್ ಕೆ.ಸಿ. ಸೌಮ್ಯ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಅಂತರ ಇಲಾಖಾ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬದ ಪ್ರಯುಕ್ತ ಭಕ್ತರು ಗಣಪತಿ ಪ್ರತಿಷ್ಠಾಪನೆ ಸಂಬಂಧ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಗಣೇಶೋತ್ಸವ ಆಚರಿಸಬೇಕು. ಬೆಳಕು, ನೀರಿನ ವ್ಯವಸ್ಥೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ತುರ್ತು ವೈದ್ಯಕೀಯ ನೆರವು, ಸೆಸ್ಕ್ ಮತ್ತು ಅಗ್ನಿ ಶಾಮಕ ಸಿಬ್ಬಂದಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಿಪಿಐ ವಸಂತಕುಮಾರ್, ಸಬ್ ಇನ್ಸ್ ಪೆಕ್ಟರ್ ಕಾವ್ಯ, ಗ್ರೇಡ್- ೨ ತಹಸೀಲ್ದಾರ್ ಸಿ. ಸ್ವಾಮಿ, ತಾಪಂ ಅಧಿಕಾರಿ ಪ್ರಕಾಶ್, ಸಿಡಿಪಿಒ ವೆಂಕಟೇಶ್, ಪುರಸಭೆ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್ ಇತರರಿದ್ದರು.










