ಹಾಸನ HASSAN: ನಗರದ ಸ್ಕಾಲರ್ಸ್ ಇಂಟರ್‌ನ್ಯಾಷನಲ್ ಸ್ಕೂಲಿನ ನಾಲ್ಕನೇ ತರಗತಿ ವಿದ್ಯಾರ್ಥಿನಿ ಕನಸು, ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ತಮ್ಮ ನೃತ್ಯ ಕೌಶಲ್ಯದಿಂದ ಪ್ರೇಕ್ಷಕರು ಮತ್ತು ತೀರ್ಪುಗಾರರನ್ನು ಮೆಚ್ಚಿಸಿದ ಕನಸು ಅಗ್ರಸ್ಥಾನ ಪಡೆದು ಶಾಲೆಯ ಗೌರವವನ್ನು ಹೆಚ್ಚಿಸಿದ್ದಾರೆ. ಅನೇಕ ಜಿಲ್ಲೆಗಳಿಂದ ಬಂದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಶಾಲೆಯ ಸಂಸ್ಥಾಪಕ, ಆಡಳಿತಾಧಿಕಾರಿ ಡಾ. ಎಚ್.ಎನ್.ಚಂದ್ರಶೇಖರ್ ಮತ್ತು ಕಾರ್ಯದರ್ಶಿ ಮಮತಾ ಚಂದ್ರಶೇಖರ್ ಅವರು ಕನಸು ಸಾಧನೆಯನ್ನು ಅಭಿನಂದಿಸಿದ್ದು, ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಬೇಕೆಂದು ಹೇಳಿದ್ದಾರೆ.
ಶಿಕ್ಷಕರು ಮತ್ತು ಪೋಷಕರ ಬೆಂಬಲವು ಈ ಯಶಸ್ಸಿಗೆ ಕಾರಣವಾಗಿದೆ ಎಂದು ಕನಸು ಹೇಳಿದ್ದಾರೆ.










