1.4 C
Munich
Home ಜಿಲ್ಲೆ ಹಾಸನ ಹಾಸನ: ಇಂದು ಪಾಂಚಜನ್ಯ ಹಿಂದೂ ಗಣಪತಿ ವಿಸರ್ಜನೆ-ಮದ್ಯ ಮಾರಾಟ ನಿಷೇಧ, ಬಿಗಿ ಪೊಲೀಸ್ ಬಂದೋಬಸ್ತ್

ಹಾಸನ: ಇಂದು ಪಾಂಚಜನ್ಯ ಹಿಂದೂ ಗಣಪತಿ ವಿಸರ್ಜನೆ-ಮದ್ಯ ಮಾರಾಟ ನಿಷೇಧ, ಬಿಗಿ ಪೊಲೀಸ್ ಬಂದೋಬಸ್ತ್

ಹಾಸನ: ನಗರದಲ್ಲಿ ಜಿಲ್ಲಾ ಕಸಾಪ ಭವನದ ಆವರಣದಲ್ಲಿ ಪ್ರತಿಷ್ಠಾಪಿಸಲಾದ ಪಾಂಚಜನ್ಯ ಹಿಂದೂ ಗಣಪತಿಯ ವಿಸರ್ಜನೆ ಇಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಶೋಭಾಯಾತ್ರೆ ಆರಂಭವಾಗಲಿದ್ದು, ಸಾವಿರಾರು ಭಕ್ತರು ಭಾಗಿಯಾಗಲಿದ್ದಾರೆ.

ಶೋಭಾಯಾತ್ರೆಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹಾಗೂ ಶಾಸಕರಾದ ಸಿಮೆಂಟ್ ಮಂಜು ಮತ್ತು ಎಚ್.ಕೆ. ಸುರೇಶ್ ಉಪಸ್ಥಿತರಿರುವರು. ನಗರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗುವ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪಾಂಚಜನ್ಯ ಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಸನ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

error: Content is protected !!