10.4 C
Munich
Home News ಹಾಸನದಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

ಹಾಸನದಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

ಹಾಸನ: ನಗರದಲ್ಲಿ ಇಂದು ಮಧ್ಯಾಹ್ನದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ನಗರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಗಂಟೆಗಟ್ಟಲೆ ಸುರಿದ ಮಳೆಯಿಂದ ಮುಖ್ಯ ರಸ್ತೆಗಳು ಕೆರೆ-ಕಾಲುವೆಗಳಂತೆ ನೀರಿನಿಂದ ತುಂಬಿ ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.

ನಗರದ ಆರ್.ಸಿ. ರಸ್ತೆ, ಹೊಸ ಬಸ್ ನಿಲ್ದಾಣ, ಗಾಂಧಿ ಬಜಾರ್ ಸೇರಿದಂತೆ ಅನೇಕ ಕಡೆ ನೀರು ನುಗ್ಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಮಳೆಯ ನೀರು ಮನೆಗಳಿಗೆ ನುಗ್ಗಿ ಹಲವರು ತೊಂದರೆ ಅನುಭವಿಸಿದರು.

error: Content is protected !!