ಹಾಸನ: ಇದೇ ತಿಂಗಳ ಸೆ.15 ರಂದು ಬೆಳಗ್ಗೆ 11ಗಂಟೆಗೆ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಒಕ್ಕಲಿಗ ಧರ್ಮ ಮಹಾಸಭಾ ಹಾಸನ ಘಟಕದ ಉದ್ಘಾಟನೆ ಹಾಗೂ ಜನಗಣತಿ ಒಕ್ಕಲಿಗರ ಜಾಗೃತ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗ ಧರ್ಮ ಮಹಾಸಭಾದ ಜಿಲ್ಲಾಧ್ಯಕ್ಷೆ ಭಾರತಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉದ್ಘಾಟನೆಯನ್ನು ಕುಣಿಗಲ್ ತಾಲ್ಲೂಕು ಕಸಬಾ ಹೋಬಳಿ ಕಿತ್ತಮಂಗಲ ಅರೆ ಶಂಕರ ಮಠದ ಮಠಾಧೀಶರಾದ ಶ್ರೀ ಸಿದ್ದರಾಮಯ್ಯ ಚೈತನ್ಯ ಮಹಾಸ್ವಾಮೀಜಿ ನೆರವೇರಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಹೆಚ್.ಪಿ. ಸ್ವರೂಪ ಪ್ರಕಾಶ್, ಮಾಜಿ ಶಾಸಕ ಪ್ರೀತಂಗೌಡ, ಹಾಸನ ಮಹಾನಗರ ಪಾಲಿಕೆಯ ಮೇಯರ್ ಹೇಮಲತಾ, ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ, ಎಸ್.ಪಿ ಮೊಹಮ್ಮದ್ ಸುಜೀತಾ, ತಹಸಿಲ್ದಾರ್ ಗೀತಾ, ಪಾಲಿಕೆ ಮೇಯರ್ ಕೃಷ್ಣಮೂರ್ತಿ, ಕಾಂಗ್ರೆಸ್ ಮುಖಂಡ ದೇವರಾಜೇಗೌಡ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಹಾಸಭಾ ಮುಖಂಡರಾದ ದೇವರಾಜ್, ರಂಗಸ್ವಾಮಿ, ಶ್ರೀನಿವಾಸ್, ಮೊದಲಾದವರಿದ್ದರು.










