ಹಾಸನ: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ತಮ್ಮನ್ನು ನೇಮಿಸಲಾಗಿದೆ ಎಂದು ಡಾ.ಗೋಪಾಲೇಗೌಡ ಮರ್ಕುಲಿ ತಿಳಿಸಿದರು.
ಇಂದು ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ಎಐಸಿಸಿ ಸದಸ್ಯರಾದ ಗಂಡಸಿ ಶಿವರಾಂ ಅವರ ಶಿಫಾರಸ್ಸಿನ ಮೇರೆಗೆ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದರು.
ತನಗೆ ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ, ನಿಷ್ಠೆಯಿಂದ ನಿಭಾಯಿಸುವೆ ಎಂದರು.
ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ, ಸ್ಥಳೀಯ ನಾಯಕರ ಸಹಕಾರದೊಂದಿಗೆ ಪಕ್ಷ ಸಂಘಟನೆ ಮಾಡುವುದಾಗಿ ತಿಳಿಸಿದರು. ಹಾಗೆಯೇ ಕಾರ್ಮಿಕರ ಏಳಿಗೆಗೆ ಶ್ರಮಿಸುವೆ, ನನಗೆ ಈ ಅವಕಾಶ ಕಲ್ಪಿಸಿರುವ ಜಿಲ್ಲೆ ಹಾಗೂ ರಾಜ್ಯದ ಎಲ್ಲ ನಾಯಕರಿಗೆ ಧನ್ಯವಾದ ಹೇಳಿದರು.
ಇದೇ ವೇಳೆ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆಕಾಂಕ್ಷಿಗಳಲ್ಲಿ ನಾನೂ ಒಬ್ಬನಾಗಿದ್ದೇನೆ. ನನಗೆ ಜವಾಬ್ದಾರಿ ನೀಡಿದರೆ ನಿಭಾಯಿಸುವೆ ಎಂದು ಪ್ರಶ್ನೆಗೆ ಉತ್ತರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಅರಸೀಕೆರೆ, ದೇವರಾಜೇಗೌಡ, ಗಿರೀಶ್, ಸತೀಶ್ ಇದ್ದರು.










