20.1 C
Munich
Home News ಸಕಲೇಶಪುರ: ಕ್ರೀಡೆಯನ್ನು ಕ್ರೀಡೆಯಾಗಿ ಸ್ವೀಕರಿಸಬೇಕು: ಶಾಸಕ ಸಿಮೆಂಟ್ ಮಂಜುನಾಥ್

ಸಕಲೇಶಪುರ: ಕ್ರೀಡೆಯನ್ನು ಕ್ರೀಡೆಯಾಗಿ ಸ್ವೀಕರಿಸಬೇಕು: ಶಾಸಕ ಸಿಮೆಂಟ್ ಮಂಜುನಾಥ್

ಸಕಲೇಶಪುರ: ಸೋಲು ಗೆಲುವು ಕ್ರೀಡೆಯಲ್ಲಿ ಸಹಜವಾಗಿದ್ದು ಏನೆ ಫಲಿತಾಂಶ ಹೊರಹೊಮ್ಮಲಿ ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸಬೇಕೆಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಗುರುವಾರ ಪಟ್ಟಣದ ಸುಭಾಷ್ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಪ್ರೌಢಶಾಲೆಗಳ ಮಟ್ಟದ ಕ್ರೀಡಾಕೂಟದ ಉದ್ಘಾಟಿಸಿ ಮಾತನಾಡಿ ಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಇವುಗಳನ್ನು ಸಮಾನ ಮನೋಭಾವದಿಂದ ಕಂಡಾಗ ಮಾತ್ರ ಕ್ರೀಡೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ.

ಶಿಕ್ಷಣದ ಜತೆಗೆ ಕ್ರೀಡೆ ಅಗತ್ಯ.ಉತ್ತಮ ಆರೋಗ್ಯವಿರುವ ದೇಹದಲ್ಲಿ ಆರೋಗ್ಯಕರ ಮನಸ್ಸು ಇರುತ್ತದೆ.ಕ್ರೀಡೆಯನ್ನು ಕ್ರೀಡೆಯಾಗಿ ಸ್ವೀಕರಿಸಿ,ತೀರ್ಪುಗಾರರು ನೀಡುವ ತೀರ್ಪು ಗೌರವಿಸಿ ಸಂಭ್ರಮದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಾಧಕರಾಗಿ ಶಾಲೆಗಳಿಗೆ ತೆರಳಿ ಎಂದು ಕಿವಿಮಾತು ಹೇಳಿದರು.ಜೀವನದಲ್ಲಿ ಕ್ರೀಡೆ ಎಂಬುವುದು ಪ್ರಮುಖ ಪಾತ್ರ ವಹಿಸಿಸುತ್ತದೆ. ನಿರಂತರ ಕ್ರೀಡೆ,ವ್ಯಾಯಮದಿಂದ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ.ಈ ಹಿಂದೆ ಅಂತರಾಷ್ಟೀಯ ಮಟ್ಟದ ಕ್ರೀಡಾಕೂಟಗಳಲ್ಲಿ ನಮ್ಮ ದೇಶ ಅಷ್ಟಾಗಿ ಸಾಧನೆ ಮಾಡುತ್ತಿರಲಿಲ್ಲ. ಆದರೆ ಇದೀಗ ಕೇಂದ್ರ ಸರ್ಕಾರ ಕ್ರೀಡಾಪಟುಗಳಿಗೆ ಹೆಚ್ಚಿನ ಸವಲತ್ತು ನೀಡುವುತ್ತಿರುವುದರಿಂದ ಕ್ರೀಡೆಯಲ್ಲಿ ನಮ್ಮ ದೇಶ ಗಮರ್ನಾಹ ಸಾಧನೆ ಮಾಡುತ್ತಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಮಾತನಾಡಿ ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಅಗತ್ಯ, ವಿದ್ಯಾರ್ಥಿಗಳು ಯಾವುದಾದರು ಒಂದು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ತಾಲೂಕು ಮಟ್ಟದಲ್ಲಿ ಗೆಲುವು ಸಾಧಿಸುವ ವಿದ್ಯಾರ್ಥಿಗಳು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಗೆಲುವು ಸಾಧಿಸಿ ಸಾ‘ನೆ ಮಾಡಬೇಕೆಂದರು.

ಈ ಸಂಧರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಕುಶ್ವಂತ್,ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ತಮ್ಮಣ್ಣ ಶೆಟ್ಟಿ, ಗ್ರಾ.ಪಂ ಸದಸ್ಯ ಕಾರ್ತೀಕ್, ಖಾಸಗಿ ಶಾಲೆಗಳ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಮಲ್ನಾಡ್ ಜಾಕೀರ್ , ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ಸಂಯೋಜಕ ಮಂಜುನಾಥ್ ,ಟಸ್ಕೇರಿಯಾ ಅಕಾಡೆಮಿಯ ಗಿರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

13ಎಸ್.ಕೆ.ಪಿ.ಪಿ 2 ಸಕಲೇಶಪುರ ಪಟ್ಟಣದ ಸುಭಾಷ್ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಪ್ರೌಢಶಾಲೆಗಳ ಮಟ್ಟದ ಕ್ರೀಡಾಕೂಟವನ್ನು ಶಾಸಕ ಸಿಮೆಂಟ್ ಮಂಜು ಶಾಟ್‌ಪುಟ್ ಎಸೆಯುವ ಮೂಲಕ ಉದ್ಘಾಟಿಸಿದರು.

error: Content is protected !!