ಹಾಸನ: ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಟ್ರಕ್ ಹರಿದು ಹತ್ತು ಮಂದಿ ಮೃತಪಟ್ಟಿದ್ದ ಧಾರುಣ ಘಟನೆಯ ಹಿನ್ನೆಲೆಯಲ್ಲಿ, ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಶನಿವಾರ ಮೃತರ ಮನೆಗಳಿಗೆ ಭೇಟಿ ನೀಡಿದರು.
ಸ್ವಾಮೀಜಿ ಹೊಳೆನರಸೀಪುರ ತಾಲ್ಲೂಕಿನ ಕಬ್ಬಿನಹಳ್ಳಿ ಗ್ರಾಮದ ಪ್ರವೀಣ್ ಮತ್ತು ಕುಮಾರ್ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸ್ವಾಮೀಜಿ ಮಾತನಾಡಿ, ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸಿದರು.










