13.5 C
Munich
Home News ಹಾಸನ: ಸೈಕಲ್ ಏರಿ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ

ಹಾಸನ: ಸೈಕಲ್ ಏರಿ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ

ಹಾಸನ : ಅಂತರಾಷ್ಟ್ರೀಯ  ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ಆಯೋಜಿಸಲಾಗಿದ್ದ ಸೈಕಲ್ ರ‍್ಯಾಲಿಗೆ ಡಿಸಿ ಕೆ.ಎಸ್. ಲತಾಕುಮಾರಿ ಚಾಲನೆ ನೀಡಿದರು.

ಸ್ವತಃ ಡಿಸಿ ಅವರೇ ಸೈಕಲ್ ಏರಿ ಸಿಟಿ ರೌಂಡ್ಸ್ ಮಾಡುವ ಮೂಲಕ ಗಮನ ಸೆಳೆದರು. ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೊರಟ ಸೈಕಲ್ ಜಾಥಾ, ನಗರದ ಎನ್.ಆರ್ ಸರ್ಕಲ್, ಹೇಮಾವತಿ ಪ್ರತಿಮೆ, ಆರ್.ಸಿ ರೋಡ್, ಎಂ.ಜಿ ರೋಡ್ ಹೀಗೆ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್ ಪೀರ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸೈಕಲ್‌ನಲ್ಲಿ ಜಿಲ್ಲಾಧಿಕಾರಿಗಳನ್ನು ಹಿಂಬಾಲಿಸಿ ಪ್ರಜಾಪ್ರಭುತ್ವ ದಿನಾಚರಣೆ ಮಹತ್ವದ ಅರಿವು ಮೂಡಿಸಿದರು.

error: Content is protected !!