14.2 C
Munich
Home News ಸಕಲೇಶಪುರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಿಂದ ಕೆಲವು ಶಿಕ್ಷಕರಿಗೆ ವಿನಾಯಿತಿಗೆ ಆಗ್ರಹ

ಸಕಲೇಶಪುರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಿಂದ ಕೆಲವು ಶಿಕ್ಷಕರಿಗೆ ವಿನಾಯಿತಿಗೆ ಆಗ್ರಹ

ಸಕಲೇಶಪುರ:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಿಂದ ಕೆಲವು ಶಿಕ್ಷಕರಿಗೆ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಉಪವಿಭಾಗಾಧಿಕಾರಿ ರಾಜೇಶ್‌ರವರಿಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ಸಂತಜೋಸೆಫ್ ಶಾಲಾ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕ ಸಕಲೇಶಪುರ ವತಿಯಿಂದ ಮನವಿ ಸಲ್ಲಿಸಿ ದಿನಾಂಕ 22-09-2025 ರಿಂದ 07-10-2025ರ ವರೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗಣತಿ ಕಾರ್ಯದಿಂದ 55 ವರ್ಷ ಮೇಲ್ಪಟ್ಟ ನಿವೃತ್ತಿ ಅಂಚಿನಲ್ಲಿರುವ ಎಲ್ಲಾ ಶಿಕ್ಷಕರು ಹಾಗೂ ಇತರೆ ಇಲಾಖೆ ನೌಕರರು ಹಾಗೂ ಗರ್ಭಿಣಿಯರು, ಬಾಣಂತಿಯರು, ವಿಕಲಚೇತನರು. ಅನಾರೋಗ್ಯ ಪೀಡಿತರನ್ನು ಗಣತಿ ಕಾರ್ಯಕ್ಕೆ ನಿಯೋಜಿಸುತ್ತಿರುವುದು ತಿಳಿದು ಬಂದಿದ್ದು ತಾವುಗಳು ದಯಮಾಡಿ ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯ ದೃಷ್ಟಿಯಿಂದ ಗಣತಿ ಸಮೀಕ್ಷಾ ಕಾರ್ಯದಿಂದ ವಿನಾಯಿತಿ ನೀಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ತಮ್ಮಣ್ಣಶೆಟ್ಟಿ, ಕಾರ್ಯದರ್ಶಿ ಜಗದೀಶ್, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷೆ ರೇಣುಕಾ ಇನ್ನಿತರರು ಹಾಜರಿದ್ದರು.

error: Content is protected !!