2 C
Munich
Home News ಚನ್ನರಾಯಪಟ್ಟಣ: ಹಿರೀಸಾವೆ ಪಿಯು ಕಾಲೇಜಿನಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ – ಸಾವಯವ ಕೃಷಿಗೆ ಪ್ರೋತ್ಸಾಹ

ಚನ್ನರಾಯಪಟ್ಟಣ: ಹಿರೀಸಾವೆ ಪಿಯು ಕಾಲೇಜಿನಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ – ಸಾವಯವ ಕೃಷಿಗೆ ಪ್ರೋತ್ಸಾಹ

ಚನ್ನರಾಯಪಟ್ಟಣ: ಸಾವಯವ ಕೃಷಿ ಪದ್ದತಿಯಲ್ಲಿ ರಾಸಾಯನಿಕ ಮುಕ್ತವಾದ ಆರೋಗ್ಯಕರ ಆಹಾರಗಳನ್ನು ಬೆಳೆಯಬಹುದು ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ರಾಘವೇಂದ್ರ ಹೇಳಿದರು. ತಾಲ್ಲೂಕಿನ ಹಿರೀಸಾವೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಪರಿಸರ, ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಕೃಷಿ ಪದ್ದತಿಯಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ಪರಿಸರದ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ ಎಂದರು. ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರಿಸರದ ಬಗ್ಗೆ ಪ್ರಬಂಧ, ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಕೃಷಿ ಮೇಲ್ವಿಚಾರಕ ಮಹದೇವ್ ಪ್ರಸಾದ್ ಬಹುಮಾನಗಳನ್ನು ನೀಡಿದರು. ಕಾಲೇಜು ಆವರಣದಲ್ಲಿ ಗಿಡಗಳನ್ನು ನೀಡಲಾಯಿತು.

ಕಾಲೇಜಿನ ಉಪನ್ಯಾಸಕಿ ನೇತ್ರಾವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಲಯದ ಮೇಲ್ವಿಚಾರಕ ಸುಜಿತ್, ಸೇವಾಪ್ರತಿನಿಧಿಗಳಾದ ಭಾಗ್ಯ, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಿರೀಸಾವೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಬುಧವಾರ ಏರ್ಪಡಿಸಿದ್ದ ಪರಿಸರ ಜಾಗೃತಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕೃಷಿ ಮೇಲ್ವಿಚಾರಕ ಮಹದೇವ್ ಪ್ರಸಾದ್ ಬಹುಮಾನ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಇದ್ದರು.

error: Content is protected !!