ಹಾಸನ: ನಗರದ ಶಿವ್ಯಾ ಐವಿಎಫ್ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯ ಪ್ರಸೂತಿ ಸ್ತ್ರೀ ರೋಗ ತಜ್ಞರಾದ ಡಾ.ಭವ್ಯ ಸುನಿಲ್ ಅವರು ಯಶಸ್ವಿಯಾಗಿ ಚಿಕಿತ್ಸೆ ನಡೆಸಿದ್ದಾರೆ.
ಡಾ.ಸುನಿಲ್ ಅವರು ಮಕ್ಕಳ ತಜ್ಞರಾಗಿದ್ದು, ಮೂರೂ ಮಕ್ಕಳೂ ಗಂಡು ಆಗಿವೆ. ಸದ್ಯ ತಾಯಿ ಮತ್ತು ಮಕ್ಕಳು ಆರೋಗ್ಯದಿಂದ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ತಾಯಿಯೊಬ್ಬರು ಇಬ್ಬರು ಹೆಣ್ಣು ಮಕ್ಕಳು ಸೇರಿ ಮೂವರು ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು.










