14.2 C
Munich
Home News ಹಾಸನ: ಅತಿಥಿ ಉಪನ್ಯಾಸಕರ ನೇಮಕ ಸರ್ಕಾರ ಅಸ್ತು-ವಿದ್ಯಾರ್ಥಿಗಳ ಹೋರಾಟಕ್ಕೆ ಜಯ

ಹಾಸನ: ಅತಿಥಿ ಉಪನ್ಯಾಸಕರ ನೇಮಕ ಸರ್ಕಾರ ಅಸ್ತು-ವಿದ್ಯಾರ್ಥಿಗಳ ಹೋರಾಟಕ್ಕೆ ಜಯ

Even though it has been 2 months since degree colleges started in the state, injustice is being done to government college students without guest lecturers. Many universities in the state have announced exams without even holding classes.

ಹಾಸನ: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ 2 ತಿಂಗಳಾದರೂ, ಅತಿಥಿ ಉಪನ್ಯಾಸಕರಿಲ್ಲದೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ.ತರಗತಿಗಳನ್ನೇ ನಡೆಸದೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಪ್ರಕಟ ಮಾಡಿವೆ.

ಇನ್ನೊಂದೆಡೆ, ಖಾಸಗಿ ಕಾಲೇಜುಗಳಲ್ಲಿ ಸರಾಗವಾಗಿ ಪಾಠಗಳು ನಡೆದು ಅಲ್ಲಿನ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗುತ್ತಿದ್ದಾರೆ.ರಾಜ್ಯದ ಬಡ ವಿದ್ಯಾರ್ಥಿಗಳಿಗಾದ ಈ ಘೋರ ಅನ್ಯಾಯ ಖಂಡಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ರಾಜ್ಯದ ವಿದ್ಯಾರ್ಥಿಗಳು ಕಳೆದ ಎರಡು ತಿಂಗಳಿಂದ ಹೋರಾಟ ನಡೆಸಿದ್ದರು.

ಜಿಲ್ಲಾ ಮಟ್ಟದಲ್ಲೂ ಪ್ರತಿಭಟನೆಗಳನ್ನು ನಡೆಸಿ, ಸೆ.27 ರಂದು ರಾಜ್ಯವಾಪಿ ಸ್ವಯಂ ಪ್ರೇರಿತರಾಗಿ ತರಗತಿ ಬಹಿಷ್ಕರಿಸಿದ್ದಾರೆ. ಈಶ್ವರ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿ ಅವರ ಆದರ್ಶಗಳಿಂದ ಪ್ರೇರಿತರಾಗಿ ತಮ್ಮ ಶಿಕ್ಷಣದ ಹಕ್ಕನ್ನು ಕಾಪಾಡಿಕೊಳ್ಳಲು ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕಿಂದು ಜಯ ದೊರೆತಿದೆ. ಅಂತಿಮವಾಗಿ, ಕರ್ನಾಟಕ ಸರ್ಕಾರ ಅತಿಥಿ ಉಪನ್ಯಾಸಕರ ನೇಮಕಾತಿಗೆ ಮುಂದಾಗಿದೆ.

ವಿದ್ಯಾರ್ಥಿಗಳ ಕೂಗಿಗೆ ಸ್ಪಂದಿಸಿದ ಸರ್ಕಾರದ ನಡೆಯನ್ನು ಎಐಡಿಎಸ್‌ಒ ಸ್ವಾಗತಿಸಿದೆ. ಪ್ರತಿ ವಿಷಯಕ್ಕೆ ಕನಿಷ್ಠ 30ಗಂಟೆ ಪಾಠ ನಡೆಸಿದ ನಂತರವಷ್ಟೇ ಪರೀಕ್ಷೆ ನಡೆಸಬೇಕೆಂದು ರಾಜ್ಯ ಸರ್ಕಾರವನ್ನು ಈ ಮೂಲಕ ಆಗ್ರಹಿಸಿದೆ.

ಹೋರಾಟದಿಂದ ಮಾತ್ರವೇ ಬದಲಾವಣೆ ಸಾಧ್ಯ ಎಂಬ ಸಂದೇಶವನ್ನು ವಿದ್ಯಾರ್ಥಿಗಳು ಈ ಮೂಲಕ ಎಲ್ಲೆಡೆ ಸಾರಿದ್ದಾರೆ. ಹೋರಾಟದ ಭಾಗವಾದ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ, ಕೈಜೋಡಿಸಿದ ಜನತೆಗೆ ಜಿಲ್ಲಾ ಸಂಚಾಲಕಿ ಚೈತ್ರಾ ಧನ್ಯವಾದ ಹೇಳಿದ್ದಾರೆ.

error: Content is protected !!