15.2 C
Munich
Home News ಬೇಲೂರು: ಹಾರ್ಡವೇರ್ ಅಂಗಡಿಯಲ್ಲಿ ಹೊತ್ತಿದ ಆಕಸ್ಮಿಕ ಬೆಂಕಿಗೆ ಅಪಾರ ಹಾನಿ

ಬೇಲೂರು: ಹಾರ್ಡವೇರ್ ಅಂಗಡಿಯಲ್ಲಿ ಹೊತ್ತಿದ ಆಕಸ್ಮಿಕ ಬೆಂಕಿಗೆ ಅಪಾರ ಹಾನಿ

fire broke out at a hardware store in Huskuru village in Belur taluk of the district late last night.

ಹಾಸನ :  ಜಿಲ್ಲೆಯ ಬೇಲೂರು ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ತಡರಾತ್ರಿ ಹಾರ್ಡ್‌ವೇರ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ರಂಗಸ್ವಾಮಿ ಎಂಬುವವರಿಗೆ ಸೇರಿದ ಹಾರ್ಡ್‌ವೇರ್ ಅಂಗಡಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಅಂಗಡಿಗೆ ವ್ಯಾಪಿಸಿತು. ಪರಿಣಾಮವಾಗಿ ಅಂಗಡಿಯಲ್ಲಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದವು.

ಅಗ್ನಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಮಾಹಿತಿ ದೊರೆತ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಕಪಕ್ಕದ ಅಂಗಡಿಗಳಿಗೆ ಬೆಂಕಿ ವ್ಯಾಪಿಸದಂತೆ ತಡೆಯುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಆದಾಗ್ಯೂ, ಹಾರ್ಡ್‌ವೇರ್ ಅಂಗಡಿಯಲ್ಲಿ ಸಂಗ್ರಹವಾಗಿದ್ದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

error: Content is protected !!