ಹಾಸನ: ಹಾಸನ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಎಸ್. ಅಂಕನಹಳ್ಳಿ ಅರಣ್ಯ ಪ್ರದೇಶದ ಬಳಿ ಭೀಕರ ಕೊಲೆ ನಡೆದಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ತಾಲೂಕಿನ ಹಳ್ಳಿ ಮೈಸೂರು ಹೋಬಳಿ ಆಲಗೌಡನಹಳ್ಳಿ ಗ್ರಾಮದ ಸಮೀಪದಲ್ಲಿ ಅಜ್ಞಾತರು ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿ, ಹೆಣದ ಮೇಲೆ ಹಾಗೂ ಪಕ್ಕದಲ್ಲಿದ್ದ ಬೈಕ್ ಮೇಲೆ ಸೊಪ್ಪು ಮುಚ್ಚಿ ಪರಾರಿಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಮೃತನನ್ನು ಹೊಳೆನರಸೀಪುರದ ಅಂಬೇಡ್ಕರ್ ನಗರದ ನಿವಾಸಿ ಮಣಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಹಳ್ಳಿ ಮೈಸೂರು ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದು, ಫಾರೆನ್ಸಿಕ್ ತಂಡವನ್ನು ಕರೆಸಿ ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕೊಲೆ ರಾತ್ರಿ ವೇಳೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.










