ಚನ್ನರಾಯಪಟ್ಟಣ :ರಾಜ್ಯ ಕಾಂಗ್ರೆಸ್ ಸರ್ಕಾರದ ಬಡವರ ಪರವಾದ 05 ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಲ್ ಪಿ ಪ್ರಕಾಶ್ ಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿ ಕೇಂದ್ರದ ವೀರಶೈವ ಭವನದಲ್ಲಿ ತಾಲ್ಲೂಕು ಪಂಚಾಯತ ಚನ್ನರಾಯಪಟ್ಟಣ, ನುಗ್ಗೇಹಳ್ಳಿ ಗ್ರಾಮ ಪಂಚಾಯತ ವತಿಯಿಂದ ಗ್ಯಾರಂಟಿ ಯೋಜನಾ ಸಮಿತಿ ಹೋಬಳಿ ಮಟ್ಟದ ಜನ ಸಂಪರ್ಕ ಸಭೆಯನ್ನು ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಎಲ್.ಪಿ. ಪ್ರಕಾಶ್ ಗೌಡ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನಲ್ಲಿ ಸಮರ್ಪಕವಾಗಿ ಜಾರಿಗೆ ತರುವ ಮೂಲಕ ಇಡೀ ಜಿಲ್ಲೆಯಲ್ಲಿ ಚನ್ನರಾಯಪಟ್ಟಣ ತಾಲ್ಲೂಕು ಎರಡನೇ ಸ್ಥಾನ ಪಡೆದಿದೆ ಶೇಕಡ 98.75 ರಷ್ಟು ಯೋಜನೆ ಸಂಪೂರ್ಣವಾಗಿ ಅನುಷ್ಠಾನಕ್ಕೆ ತರಲಾಗಿದೆ ಎಂದರು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಂತೆ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ತಾವು ಅಧ್ಯಕ್ಷರಾದ ಮೇಲೆ ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ಹೋಬಳಿ ಮಟ್ಟದಲ್ಲಿ ಸಭೆ ಮಾಡುವ ಮೂಲಕ ಗ್ಯಾರಂಟಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದವರೆಗೂ ಎಲ್ಲಾ ಫಲಾನುಭವಿಗಳಿಗೂ ತಲುಪಿಸುವ ಕೆಲಸ ಮಾಡಲಾಗಿದೆ ಎಂದರು.
ತಾಲ್ಲೂಕು ಪಂಚಾಯತ ಕಾರ್ಯನಿರ್ವಣಾಧಿಕಾರಿ ಹರೀಶ್ ಗ್ಯಾರಂಟಿ ಯೋಜನೆಗಳ ವರದಿಯ ಅಂಕಿ ಅಂಶ ನೀಡಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತ ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಗಿರೀಶ್, ಗ್ರಾಮ ಪಂಚಾಯತ ಅಧ್ಯಕ್ಷ ಎನ್ ಎಸ್ ಮಂಜುನಾಥ್, ಸಮಿತಿಯ ಸದಸ್ಯರಾದ ಎಂಎಸ್ ಜನಾರ್ಧನ್, ಎಆರ್ ನಾಗೇಶ್, ಮಿಲಿಟರಿ ಮಂಜು, ಕೆ.ಎನ್. ನಾಗೇಶ್, ಎಚ್ .ಆರ್. ಪ್ರಕಾಶ್, ನಿಶ್ಚಲ್, ಗಣೇಶ್, ಬಿ. ಆರ್. ಕೆಂಪೇಗೌಡ, ರಂಗಸ್ವಾಮಿ ಎಚ್. ಕೆ, ರಂಗಸ್ವಾಮಿ, ಗ್ರಾಪಂ ಸದಸ್ಯರಾದ ನಟರಾಜ್ ಯಾದವ್, ರಮ್ಯಾ ಲೋಕೇಶ್, ಗೌಡಕಿ ಮಂಜು, ಕಾರ್ಯದರ್ಶಿ ರಾಜಕುಮಾರ್, ಬಿಲ್ ಕಲೆಕ್ಟರ್ ನಾಗರಾಜು, ಸೋಮು, ಸೇರಿದಂತೆ ಇತರರು ಹಾಜರಿದ್ದರು .










