ಹಾಸನ: ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಜಿಲ್ಲೆಯ ವಿದ್ಯಾರ್ಥಿಗಳು ಆಯ್ಕೆ

Karate athletes who performed well in the district-level pre-university college sports meet have been selected for the state-level competition.

ಹಾಸನ: ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕರಾಟೆ ಕ್ರೀಡಾಪಟುಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

 ಮಂಗಳ ಮೈಲ್ ಸ್ಟೋನ್ ಹಾಗೂ ಕುವೆಂಪು ಪದವಿ ಪೂರ್ವ ಕಾಲೇಜುಗಳಲ್ಲಿ ಸೋಮವಾರ ನಡೆದ ಕರಾಟೆ ಪಂದ್ಯಾವಳಿಯಲ್ಲಿ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಶ್ರೇಷ್ಠ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮೈನಸ್ 40 ಕೆ.ಜಿ ವಿಭಾಗದಲ್ಲಿ ವಿದ್ಯಾನಿಕೇತನ ಕಾಲೇಜಿನ ಮೊಹಮ್ಮದ್ ಸೂಜನ್, 45-50 ಕೆ.ಜಿ ವಿಭಾಗದಲ್ಲಿ ಸಂತ ಜೋಸೆಫ್ ಕಾಲೇಜಿನ ಮಹಮ್ಮದ್ ನಿಹಾಲ್, ಮತ್ತು ಬಾಲಕಿಯರ 45-50 ಕೆ.ಜಿ ವಿಭಾಗದಲ್ಲಿ ಜಿ.ಎಂ. ಕಾಲೇಜಿನ ಬಿ.ಬಿ. ಹಾಲಿಮ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಕರಾಟೆ ಕ್ರೀಡಾಪಟು ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಭಜನೂರು ಮೊಹಮ್ಮದ್ ಆರಿಫ್ ತರಬೇತಿ ನೀಡಿದ್ದಾರೆ.