11.1 C
Munich
Home ಜಿಲ್ಲೆ ಹಾಸನ: ಸ್ಕಾಲರ್ಸ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಹಾಸನ: ಸ್ಕಾಲರ್ಸ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

Hassan: The 70th Kannada Rajyotsava was celebrated with great enthusiasm and grandeur at the city's Scholars International School.

ಹಾಸನ: ನಗರದ ಸ್ಕಾಲರ್ಸ್ ಇಂಟರ್‌ನ್ಯಾಷನಲ್ ಸ್ಕೂಲ್ ನಲ್ಲಿ ಹಾಸನದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಭಾವಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರ ಮತ್ತು ನಾಡಧ್ವಜ ಹಾರಿಸಿ ರಾಷ್ಟ್ರಗೀತೆ ಹಾಗೂ ನಾಡಗೀತೆಗಳೊಂದಿಗೆ ನಮನ ಸಲ್ಲಿಸಲಾಯಿತು.

ಮಕ್ಕಳು ಕನ್ನಡದ ಮಹತ್ವ, ನಾಡಿನ ಸಂಸ್ಕೃತಿ, ಪರಂಪರೆ ಮತ್ತು ಕನ್ನಡ ಭಾಷೆಯ ಗೌರವದ ಕುರಿತು ಮಾತನಾಡಿದರು. ಹಾಗೆಯೆ ಕನ್ನಡ ನಾಡು ನುಡಿಯ ಬಗ್ಗೆ ಹಾಡುಗಳನ್ನು ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಸೊಬಗು ತುಂಬಿದರು.

ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅಂದವಾದ ಕನ್ನಡ ಬರವಣಿಗೆಯ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಎಲ್ಲ ವಿದ್ಯಾರ್ಥಿಗಳು ಸಂತಸದಿಂದ ಪಾಲ್ಗೊಂಡರು.

ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿಯನ್ನು ವಿತರಿಸಲಾಯಿತು. ಶಾಲೆಯ ಬೋಧಕರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

error: Content is protected !!