ಹಾಸನ: ರಾಜ್ಯಾದ್ಯಂತ ಸಂವಿಧಾನದ ಅರಿವು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೇರೂರಿಸಲು ಸಂವಿಧಾನ ಓದು ಅಭಿಯಾನ-ಕರ್ನಾಟಕ (ಬೆಂಗಳೂರು) ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಗಂಧದ ಕೋಡಿ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಪ್ರಥಮ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ನವೆಂಬರ್ 17ರಂದು ಮಧ್ಯಾಹ್ನ 1 ಗಂಟೆಗೆ ಹಾಸನದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ ಎಂದುರಾಜ್ಯ ಸಂವಿಧಾನ ಓದು ಅಭಿಯಾನದ ರಾಜ್ಯ ಸಂಚಾಲಕರಾದ ರಾಜು ಗೊರೂರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾದ ಈ ಸ್ಪರ್ಧೆಯ ಉದ್ದೇಶ, ಯುವ ಪೀಳಿಗೆಗೆ ಸಂವಿಧಾನದ ಮಹತ್ವ ಅದರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸಂವಿಧಾನದ ಅಂಶಗಳನ್ನು ಅಧ್ಯಯನ ಮಾಡುತ್ತಾ ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳು ಹಾಗೂ ಒಕ್ಕೂಟ ವ್ಯವಸ್ಥೆಯ ಸತ್ವವನ್ನು ವಿಶ್ಲೇಷಣೆ ಮಾಡುವ ಅವಕಾಶ ಪಡೆಯಲಿದ್ದಾರೆ ಎಂದರು.
ಸ್ಪರ್ಧೆಯಲ್ಲಿ ಹಾಸನ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಪ್ರಾಂಶುಪಾಲರ ದೃಢೀಕರಣ ಪತ್ರದೊಂದಿಗೆ ಪ್ರತೀ ಕಾಲೇಜಿನಿಂದ ಐದು ಮಂದಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಫ್ಎ, ಬಿಇ, ಎಂಬಿಬಿಎಸ್, ಬಿವಿಎಸ್ಸಿ, ಬಿಎಸ್ಸಿ (ಕೃಷಿ), ನರ್ಸಿಂಗ್ ಮತ್ತು ಐದು ವರ್ಷದ ಕಾನೂನು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಲು ಅರ್ಹರಾಗಿದ್ದಾರೆ. ಪದವಿ ನಂತರದ ವಿದ್ಯಾರ್ಥಿಗಳು ಹಾಗೂ ಬಿ.ಎಡ್ ವಿದ್ಯಾರ್ಥಿಗಳಿಗೆ ಅವಕಾಶ ಇರುವುದಿಲ್ಲ. ಎಂದು ಆಯೋಜಕರು ತಿಳಿಸಿದ್ದಾರೆ. ವಯೋಮಿತಿ 25 ವರ್ಷ ನಿಗದಿಪಡಿಸಲಾಗಿದೆ.
ವಿದ್ಯಾರ್ಥಿಗಳು ಸಂವಿಧಾನಕ್ಕೆ ಸಂಬಂಧಿಸಿದ ನಾಲ್ಕು ಪ್ರಮುಖ ವಿಷಯಗಳಲ್ಲಿ ಯಾವುದಾದರೂ ಒಂದರ ಮೇಲೆ ಪ್ರಬಂಧ ₹25,000, ₹13,000 10 ಜನರಿಗೆ ಸಾಂತ್ವನ ಬಹುಮಾನವಾಗಿ ತಲಾ ₹1,000 ನಗದು ಬಹುಮಾನ ನೀಡಲಾಗುತ್ತದೆ. ಎಲ್ಲ ಭಾಗವಹಿಸಿದವರಿಗೂ ಪ್ರಶಸ್ತಿ ಪತ್ರದೊಂದಿಗೆ ಸಂವಿಧಾನ ಓದು ಪುಸ್ತಕ ಹಾಗೂ ಸರ್ಧಾ ಪ್ರಶೋತರ ಮಾಲಿಕೆ ಪುಸ್ತಕವನ್ನು ವಿತರಿಸಲಾಗುವುದು.










