ಬೆಂಗಳೂರು: ರಾಜ್ಯದ ಪರಿಸರ ರಾಯಭಾರಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ವಿಧಿವಶರಾಗಿದ್ದಾರೆ.
ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.










