ಬೆಂಗಳೂರು: ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Nandini ghee from Karnataka is being exported to Australia, America and Saudi Arabia.

ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಭ ಹಾರೈಕೆ
ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.