ಸಕಲೇಶಪುರ: ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಡಿ.6ರಂದು ಆಯೋಜಿಸಿರುವ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಮುಖ್ಯಮಂತ್ರಿಗಳು ಉಪ ಮುಖ್ಯಮಂತ್ರಿಗಳು ಹಾಗೂ ಹಲವು ಮಂತ್ರಿಗಳು ಆಗಮಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಮನವಿ ಮಾಡಿದರು.
ಸಕಲೇಶಪುರ ಮಿನಿ ವಿಧಾನ ಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶ್ರೇಯಸ್ ಪಟೇಲ್ ಪ್ರತಿ ಮೂರು ತಿಂಗಳಿಗೆ ಒಮ್ಮೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುತ್ತಿದ್ದೇನೆ.
ಅದರಂತೆ ಪುರಸಭೆ, ಅರಣ್ಯ ಇಲಾಖೆ, ಕಂದಾಯ ಇಲಾಖೆ, ಕ್ರಾಫರ್ಡ್ ಆಸ್ಪತ್ರೆ, PWD ಸಮಾಜ ಕಲ್ಯಾಣ ಇಲಾಖೆ, ತಾಲೋಕ್ ಪಂಚಾಯತ್ ಹಾಗೂ ಇತರ ಇಲಾಖೆಗಳ ಸಭೆ ನಡೆಸಿ ತಾಲೂಕಿನಲ್ಲಿ ಇರುವ ಜ್ವಾಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಕಾಮಗಾರಿ ಪರಿಶೀಲನೆ ಮಾಡುವುದಾಗಿ ಲೋಕೋಪಯೋಗಿ ಇಲಾಖೆಗೆ ಹೇಳಿದರು.
ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಇಬ್ಬರೂ ಸೇರಿ ಕುಳಿತು ನಾಗರೀಕರಿಗೆ ತೊಂದರೆ ಆಗದಂತೆ ಸಮಸ್ಯೆ ಪರಿಹರಿಸಲು ಸೂಚಿಸಿದರು.ಎಲ್ಲಾ ಇಲಾಖೆ ಅಧಿಕಾರಿಗಳು ಜನಸಾಮಾನ್ಯರಿಗೆ ಸ್ಪಂದಿಸಿ ಕೆಲಸ ಮಾಡಿ ಯಾರಿಗೂ ತೊಂದರೆ ಆಗಬಾರದು ಎಂದು ಹೇಳಿದರು.
ಡಿ.6ಕ್ಕೆ ಹಾಸನದ ವಿಜ್ಞಾನ ಕಾಲೇಜು ಅವರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ,ಕೆ, ಶಿವಕುಮಾರ್ ಸೇರಿದಂತೆ ಹಲವು ಮಂತ್ರಿಗಳು ಆಗಮಿಸಲಿದ್ದು ಹಾಸನ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರವರ ನೇತೃತ್ವದಲ್ಲಿ ಹಲವು ಮಂತ್ರಿಗಳು ಆಗಮಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಿದರು.










