ಸಕಲೇಶಪುರ : ತಾಲೂಕಿನ ಕುಣಿಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ವಡೂರು ಗ್ರಾಮದ ನಿವಾಸಿಯಾದ ತಾರಾ ಮಹೇಶ್ ಅವರು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಕಾಂಗ್ರೆಸ್ ಸರ್ಕಾರದ ಆಡಳಿತ, ಅಭಿವೃದ್ಧಿ ಕಾರ್ಯಗಳು ಹಾಗೂ ಪಕ್ಷದ ನಾಯಕತ್ವದ ನಿಲುವುಗಳನ್ನು ಮೆಚ್ಚಿ, ತಮ್ಮ ಬೆಂಬಲಿಗರೊಂದಿಗೆ ಸಕಲೇಶಪುರ ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಮುರಳಿ ಮೋಹನ್ ಅವರ ನೇತೃತ್ವದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ಮುಖಂಡರು ಹಾಗೂ ಕುಣಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.










