ಚನ್ನರಾಯಪಟ್ಟಣ: ತಾಲ್ಲೂಕಿನ ಬೆಲಸಿಂದ ಶ್ರೀವನದಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಆರೋಪಿಗಳನ್ನು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ.
ಮೂರ್ತಿ, ನಾಗೇಶ್ ಹಾಗೂ ನಂಜುಂಡಪ್ಪ ಬಂಧಿತ ಆರೋಪಿಗಳು.
ಆರೋಪಿಗಳಿಂದ 20 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ 548 ಕೆಜಿ ತೂಕದ ಶ್ರೀಗಂಧದ ಮರದ ತುಂಡುಗಳು, ಚಕ್ಕೆಗಳು ಹಾಗೂ ಕೃತ್ಯಕ್ಕೆ ಬಳಸಿರುವ ಬೈಕ್ ಹಾಗೂ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರಣ್ಯ ಇಲಾಖೆ ಎಸಿಎಫ್ ಖಲಂದರ್ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗಿನ ಜಾವ 2.30 ರ ಸಮಯದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳ ಎರಡು ದ್ವಿಚಕ್ರ ವಾಹನಗಳು ಹಾಗೂ ಹಲವಾರು ಮಾರಕಾಸ್ತ್ರಗಳು, 4 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.










