ಚನ್ನರಾಯಪಟ್ಟಣ: ಕೆರೆ-ಕಟ್ಟೆಗಳಿಗೆ ನೀರು ತುಂಬಿದರೆ ರೈತರ ಬದುಕು ಹಸನಾಗುತ್ತದೆ – ಶಾಸಕ ಬಾಲಕೃಷ್ಣ

MLA C.N. Balakrishna said that the lives of farmers can be improved only if water is filled in the lakes and ponds.

ಚನ್ನರಾಯಪಟ್ಟಣ: ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿದ್ದಲ್ಲಿ ಮಾತ್ರ ರೈತರ ಬದುಕು ಹಸನಾಗಲು ಸಾಧ್ಯ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ತಾಲ್ಲೂಕಿನ ನುಗ್ಗೇಹಳ್ಳಿ ಗ್ರಾಮದಲ್ಲಿ ಏತನೀರಾವರಿ ಯೋಜನೆಯಡಿ ತುಂಬಿ ಹರಿಯುತ್ತಿರುವ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಮಾತನಾಡಿ, ರೈತರ ಬದುಕು ಪ್ರಗತಿ ಹೊಂದಿದರೆ ಮಾತ್ರ ದೇಶ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.

ಕೆರೆ-ಕಟ್ಟೆಗಳು ತುಂಬಿದರೆ ಅಂತರ್ಜಲ ಚೇತರಿಕೆ ಕಾಣಲಿದ್ದು ವ್ಯಾಪ್ತಿಯ ಕೊಳವೆ ಬಾವಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಲಭ್ಯವಾಗಲಿದೆ. ಇದರಿಂದ ರೈತರ ಕೃಷಿ ಚಟುವಟಿಕೆ ಇಮ್ಮಡಿಗೊಳ್ಳಲ್ಲಿದ್ದು ಆರ್ಥಿಕವಾಗಿ ರೈತ ವರ್ಗದ ಬದುಕು ಸದೃಢಗೊಳ್ಳಲಿದೆ ಎಂದು ತಿಳಿಸಿದರು.

ಪುರವರ್ಗ ಹಿರೇಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಗಂಗೆ ಪೂಜೆ ಹಾಗೂ ಬಾಗಿನ ಸಮರ್ಪಿಸುವ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ತೆಪ್ಪದಲ್ಲಿ ಕೆರೆಯ ಮಧ್ಯ ಭಾಗಕ್ಕೆ ತೆರಳಿ ಬಾಗಿನ ಅರ್ಪಿಸಿದ್ದು ವಿಶೇಷವಾಗಿತ್ತು.

ಟಿಎಪಿಸಿಎಂಎಸ್ ನಿರ್ದೇಶಕ ತೋಟಿ ನಾಗರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಆರ್.ದೊರೆಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಟರಾಜ್, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಹಾಗೂ ಇತರರು ಇದ್ದರು.

MLA C.N. Balakrishna said that the lives of farmers can be improved only if water is filled in the lakes and ponds.