ಬೆಂಗಳೂರು: ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ’- ಬೆಳಗಾವಿ ಕಲಾಪದಲ್ಲಿ ಗುಡುಗಿದ ಸಿದ್ದರಾಮಯ್ಯ, ಕಾಲೆಳೆದ ವಿಪಕ್ಷ ನಾಯಕರು

The battle for the CM's chair in the state's ruling Congress also reverberated in the Belagavi session today. The talk that started with the issue of release of funds to the MLA constituency ended with a heated exchange of words over the CM's chair.

ಬೆಂಗಳೂರು: ರಾಜ್ಯ ಆಡಳಿತಾರೂಢ ಕಾಂಗ್ರೆಸ್ ನ ಸಿಎಂ ಕುರ್ಚಿ ಕದನ ಇಂದು ಬೆಳಗಾವಿ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದೆ. ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ವಿಚಾರವಾಗಿ ಆರಂಭವಾದ ಮಾತು ಸಿಎಂ ಕುರ್ಚಿ ಗದ್ದಲದ ಮಾತಿನ ಚಕಮಕಿಯೊಂದಿಗೆ ನಿಂತಿತು.

ಇಂದು ಬೆಳಗಾವಿ ಸದನ ಕಲಾಪದಲ್ಲಿ ಆಗಿದ್ದೇನು?

ವಿಧಾನಸಭೆಯಲ್ಲಿ ಅನುದಾನ ಹಂಚಿಕೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷದ ಶಾಸಕ ಕುಣಿಗಲ್ ರಂಗನಾಥ್ ಅವರೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಡೆಗೆ ಬೆರಳು ತೋರಿಸಿ, ಮಧುಗಿರಿಗೆ 100 ಕೋಟಿ ಅನುದಾನ ಕೊಡುತ್ತೀರಿ, ಆದರೆ ನನ್ನ ಕ್ಷೇತ್ರಕ್ಕೆ ಏಕೆ ಅನುದಾನ ನೀಡುತ್ತಿಲ್ಲ? ನನ್ನ ಕ್ಷೇತ್ರಕ್ಕೆ ಹಿಂದೆ ಮಂಜೂರಾಗಿದ್ದ ಒಂದು ಸಾವಿರ ಕೋಟಿ ಅನುದಾನವನ್ನು ತಡೆ ಹಿಡಿಯಲಾಗಿದೆ ಎಂದು ಆಕ್ರೋಶದಿಂದ ಪ್ರಶ್ನಿಸಿದರು.

ರಂಗನಾಥ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರೆಂದೇ ಗುರುತಿಸಿಕೊಂಡಿದ್ದು, ಅವರ ಈ ಪ್ರಶ್ನೆಯು ಸದನದಲ್ಲಿ ಸಿಎಂ ಕುರ್ಚಿ ಕಾದಾಟದ ಕಡೆಗೆ ಹೊರಳಿತು.

The battle for the CM’s chair in the state’s ruling Congress also reverberated in the Belagavi session today. The talk that started with the issue of release of funds to the MLA constituency ended with a heated exchange of words over the CM’s chair.