ನವದೆಹಲಿ: ಹಾಸನ ಜಿಲ್ಲೆಯಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಸ್ಥಾಪನೆಗಾಗಿ ಅಗತ್ಯವಾದ ಜಾಗವನ್ನು ಈಗಾಗಲೇ ಮೀಸಲಿಡಲಾಗಿದ್ದು, ಕೇಂದ್ರ ಸರ್ಕಾರವು ತಕ್ಷಣವೇ ಅನುಮೋದನೆ ನೀಡಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಸಂಸತ್ತಿನ ಅಧಿವೇಶನದಲ್ಲಿ ಒತ್ತಾಯಿಸಿದರು.
ಈ ಕುರಿತು ಮಾತನಾಡಿದ ಅವರು, ಹಾಸನ ಜಿಲ್ಲೆ ಶೈಕ್ಷಣಿಕವಾಗಿ ಹಾಗೂ ಭೌಗೋಳಿಕವಾಗಿ ಮಹತ್ವ ಹೊಂದಿರುವ ಪ್ರದೇಶವಾಗಿದ್ದು, ಇಲ್ಲಿ ಐಐಟಿ ಸ್ಥಾಪನೆಯಾದಲ್ಲಿ ಜಿಲ್ಲೆಯಷ್ಟೇ ಅಲ್ಲದೆ ಸುತ್ತಮುತ್ತಲ ಪ್ರದೇಶಗಳ ಸಾವಿರಾರು ಯುವಕರಿಗೆ ಉನ್ನತ ತಾಂತ್ರಿಕ ಶಿಕ್ಷಣದ ಅವಕಾಶ ದೊರೆಯಲಿದೆ ಎಂದರು.
ಈಗಾಗಲೇ ರಾಜ್ಯ ಸರ್ಕಾರದಿಂದ ಅಗತ್ಯ ಜಾಗವನ್ನು ಮೀಸಲಿಡಲಾಗಿದ್ದು, ಮುಂದಿನ ಪ್ರಕ್ರಿಯೆಗಳನ್ನು ಕೇಂದ್ರ ಸರ್ಕಾರ ವೇಗವಾಗಿ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.
ಐಐಟಿ ಸ್ಥಾಪನೆಯಿಂದ ಜಿಲ್ಲೆಯ ಶಿಕ್ಷಣ ಮಟ್ಟ ಉನ್ನತವಾಗುವುದರ ಜೊತೆಗೆ ಸಂಶೋಧನೆ, ಉದ್ಯೋಗಾವಕಾಶಗಳು ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಹೊಸ ದಿಕ್ಕು ಸಿಗಲಿದೆ. ಗ್ರಾಮೀಣ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ದೂರದ ರಾಜ್ಯಗಳಿಗೆ ಹೋಗದೇ ತಮ್ಮದೇ ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
MP Shreyas Patel demanded in the Parliament session that the necessary land has already been allocated for the establishment of the Indian Institute of Technology (IIT) in Hassan district and the Central Government should immediately approve it.










