ಹೊಳೆನರಸೀಪುರ: ಶಿಸ್ತು, ಸಮಯ ಪ್ರಜ್ಞೆ ಮತ್ತು ಸೌಂದರ್ಯ ಪ್ರಜ್ಞೆಯಿಂದಲೇ ಯಶಸ್ಸು – ಮೋಹನ್ ಆಳ್ವ

Mohan Alva, head of Alva's Nudisiri Educational Institute, said that if students instill discipline, timeliness, and a sense of beauty during their studies, they can achieve success in their lives.

ಹೊಳೆನರಸೀಪುರ: ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಸಮಯದಲ್ಲಿ ಶಿಸ್ತು, ಸಮಯ ಪ್ರಜ್ಞೆ, ಸೌಂದರ್ಯ ಪ್ರಜ್ಞೆ ಇವುಗಳನ್ನು ಮೈಗೂಡಿಸಿಕೊಂಡರೆ ತಮ್ಮ ಬದುಕಿನಲ್ಲಿ ಯಶಸ್ಸು ಕಾಣಬಹುದು ಎಂದು ಆಳ್ವಾಸ್ ನುಡಿಸಿರಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಮೋಹನ್ ಆಳ್ವ ತಿಳಿಸಿದರು.

ಅವರು ಪಟ್ಟಣದ ಶಿಕ್ಷಕರ ಭವನದ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಣ್ಯರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಪ್ರತಿಯೊಂದು ಕ್ಷೇತ್ರದಲ್ಲೂ ಸಾಕಷ್ಟು ಅವಕಾಶಗಳಿದ್ದು ಸಮಯದ ಮಹತ್ವವನ್ನು ಸೂಕ್ಷ್ಮವಾಗಿ ಅರಿತು ಕೊಂಡಾಗ ಮಾತ್ರ ಹಲವು ಗುರುತರ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಸಾಧನೆಯತ್ತ ಸಾಗಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಅತ್ಯಮೂಲ್ಯ ಸಮಯ ಮತ್ತು ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಶಿಕ್ಷಣ ಎಂಬುದು ತಮ್ಮ ಭವಿಷ್ಯವನ್ನು ಮಾದರಿಯಾಗಿ ರೂಪಿಸಿಕೊಳ್ಳಲು ಇರುವ ಪ್ರಮುಖ ಅಸ್ತ್ರ. ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ತಾವುಗಳು ಉನ್ನತ ಮಟ್ಟದ ಅಧಿಕಾರಿಗಳಾಗಿ, ಹಲವು ಕ್ಷೇತ್ರಗಳಲ್ಲಿ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸುವತ್ತ ದಿಟ್ಟ ಹೆಜ್ಜೆ ಇಡಬೇಕೆಂದರು. ನೂರಾರು ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.

ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಟಿ .ಲಕ್ಷ್ಮಣ ಸೇರಿದಂತೆ ಶಿಕ್ಷಣ ಇಲಾಖೆಯ ಹಲವು ಪ್ರಮುಖರು ಉಪಸ್ಥಿತರಿದ್ದರು.

Mohan Alva, head of Alva’s Nudisiri Educational Institute, said that if students instill discipline, timeliness, and a sense of beauty during their studies, they can achieve success in their lives.