ಹಾಸನ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಆರ್ಥಿಕ ಶಕ್ತಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕ – ತಹಶೀಲ್ದಾರ್ ಲತಾ ಎಂ.ಎಚ್

Religious Endowments Department Tahsildar Lata M. H said that the Dharmasthala Rural Development Project has not only given women economic strength but also helped in their personality development.

ಹಾಸನ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಕೂಡ ಸಹಕಾರಿಯಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ತಹಶೀಲ್ದಾರ್ ಲತಾ ಎಂ. ಎಚ್ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಇಂದು ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಸ್ವಾವಲಂಬಿಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪೂರಕ ಶಕ್ತಿ ನೀಡುತ್ತಿದೆ, ಸ್ವಸಹಾಯ ಸಂಘಗಳ ಸ್ಥಾಪನೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಿ ಆ ಮೂಲಕ ಮಹಿಳೆಯರ ಬದುಕು ಹಸನಾಗಿಸಲು ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು.

ದೇವಾಲಯಗಳ ಅಭಿವೃದ್ಧಿ, ಕೆರೆ ಅಭಿವೃದ್ಧಿ, ಮೂಲಕ ಸರ್ಕಾರದ ಜೊತೆಗೆ ಸಂಘಗಳನ್ನು ಸ್ಥಾಪಿಸಿಕೊಂಡು ತನ್ನದೇ ಆದ ಜನಪರ ಕಾರ್ಯಕ್ರಮಗಳನ್ನು ಮಾಡಿ ಅಪಾರ ಜನಮನ್ನಣೆ ಗಳಿಸಿದೆ. ಇಂತಹ ಸಂಜಮುಖಿ ಕೆಲಸಗಳು ಇನ್ನಷ್ಟು ಹೆಚ್ಚಾಗಲಿ ಎಂದು ಶುಭ ಹಾರೈಸಿದರು.

ಶಿವ್ಯ ಹಾಸ್ಪಿಟಲ್ ನ ಸ್ತ್ರೀರೋಗ ತಜ್ಞೆ ಡಾ.ಭವ್ಯ ಮಾತನಾಡಿ, ಮಹಿಳೆಯರಲ್ಲಿ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದರಿಂದ ಅವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ. ಪ್ರಮುಖವಾಗಿ ಮಹಿಳೆಯರಲ್ಲಿ ಮುಟ್ಟು, ಸಂತಾನೋತ್ಪತ್ತಿ, ಅತಿಯಾದ ತೂಕ, ಚರ್ಮದಲ್ಲಿನ ಖಾಯಿಲೆಗಳು ಇದಕ್ಕೆಲ್ಲ ಪಿಸಿಓಡಿ ಕಾರಣ, ಸರಿಯಾದ ಜೀವನ ಶೈಲಿ, ದೈಹಿಕ ಚಟುವಟಿಕೆ ಹಾಗೂ ಗುಣಮಟ್ಟದ ಆಹಾರ ಸೇವನೆಯಿಂದ ಇಂತಹ ಸಮಸ್ಯೆಗಳಿಗೆ ಕಡಿವಾಣ ಹಾಕಬಹುದು ಎಂದು ಸಲಹೆ ನೀಡಿದರು.

ಪ್ರತಿಯೊಬ್ಬರೂ ದಿನನಿತ್ಯ ತಮ್ಮ ಜೀವನದಲ್ಲಿ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ತಮ್ಮ ಆರೋಗ್ಯ ರಕ್ಷಣೆ ಸಾಧ್ಯ, ಇತ್ತೀಚಿನ ದಿನಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಹಾಗೂ ಸ್ಥನ ಕ್ಯಾನ್ಸರ್ ಸಂಖ್ಯೆ ಹೆಚ್ಚಾಗಿದೆ ಹಾಗಾಗಿ ಅದಕ್ಕಾಗಿ ಕೆಲವು ತಪಾಸಣೆ ಹಾಗೂ ಚಿಕಿತ್ಸೆ ಲಭ್ಯವಿದೆ ಅವುಗಳ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಹೇಮಲತಾ ಕಮಲ್ ಕುಮಾರ್, ತಾಲೂಕು ಯೋಜನಾಧಿಕಾರಿ ಧನಂಜಯ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸರಸ್ವತಿ. ಸೇವಾ ಪ್ರತಿನಿಧಿಗಳಾದಂತಹ ಶಾಂತ ವಿಜಯಲಕ್ಷ್ಮಿ ರಾಧಿಕಾ ಇತರರು ಉಪಸ್ಥಿತರಿದ್ದರು.

Religious Endowments Department Tahsildar Lata M. H said that the Dharmasthala Rural Development Project has not only given women economic strength but also helped in their personality development.