ಸಕಲೇಶಪುರ: ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನಾಚರಣೆ

The 101st birth anniversary of former Prime Minister and Bharat Ratna Atal Bihari Vajpayee was celebrated as Good Governance Day and paid tributes.

ಸಕಲೇಶಪುರ: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸಿ ಗೌರವ ಸಲ್ಲಿಸಲಾಯಿತು.

ತಾಲೂಕು ಬಿಜೆಪಿ ಮಂಡಲದ ವತಿಯಿಂದ ಶಾಸಕ ಸಿಮೆಂಟ್ ಮಂಜು ಅವರ ನೇತೃತ್ವದಲ್ಲಿ ನಗರದ ಶಾಸಕರ ಗೃಹ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಜನ್ಮದಿನಾಚರಣೆಯನ್ನು ಆರಂಭಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು, “ವಾಜಪೇಯಿ ಅವರು ಪ್ರಾಮಾಣಿಕ, ನಿಷ್ಠಾವಂತ ಮತ್ತು ಅಜಾತಶತ್ರುವಿನಂತೆ ರಾಜಕಾರಣ ಮಾಡಿದ ಮಹಾನ್ ನಾಯಕರು. ಅವರ ಜನ್ಮದಿನವನ್ನು ದೇಶಾದ್ಯಂತ ‘ಉತ್ತಮ ಆಡಳಿತ ದಿನ’ವಾಗಿ ಆಚರಿಸಲಾಗುತ್ತದೆ” ಎಂದು ಹೇಳಿದರು.

ಇದೇ ವೇಳೆ, ಪರಿಸರ ಸಂರಕ್ಷಣೆಯ ಸಂದೇಶ ಸಾರುವ ನಿಟ್ಟಿನಲ್ಲಿ ನಗರದ ಪಂಪ್ ಹೌಸ್ ಬಳಿ ಗಿಡ ನೆಡುವ ಕಾರ್ಯಕ್ರಮ ನಡೆಸುವ ಮೂಲಕ ವಾಜಪೇಯಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

.The 101st birth anniversary of former Prime Minister and Bharat Ratna Atal Bihari Vajpayee was celebrated as Good Governance Day and paid tributes.