ಬೆಳಗಾವಿ: ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ.
ಮಾಜಿ ಡಿಸಿಎಂ, ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ್ ಅವರು, ಚಿದಾನಂದ ಸವದಿ ವಿರುದ್ಧ ಹಲ್ಲೆ ಆರೋಪ ಮಾಡಿದ್ದಾರೆ.
ಮಾತುಕತೆಗಾಗಿ ಮನೆಗೆ ಕರೆದು ನನ್ನ ತಲೆ ಒಡೆಯುವಂತೆ ಹೊಡೆದಿದ್ದಾರೆ ಎಂದು ನಿಂಗಣ್ಣ ಕರೆಣ್ಣವರ್ ಗಂಭೀರ ಆರೋಪ ಮಾಡಿದ್ದಾರೆ.
ಸದ್ಯ ಗಂಭೀರವಾಗಿ ಗಾಯಗೊಂಡ ನಿಂಗಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರ ನನಗೆ ರಕ್ಷಣೆ ನೀಡಬೇಕು. ಇಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿಂಗಪ್ಪ ಕರೆಣ್ಣವರ್ ಅಳಲು ತೋಡಿಕೊಂಡಿದ್ದಾರೆ.
Former DCM and Athani MLA Lakshman Savadi and his son Chidananda Savadi have been accused of assault. DCC Bank Labor Union President Ningappa Karennavar has accused Chidananda Savadi of assault.










