ಸಕಲೇಶಪುರ: ದೇಶದಲ್ಲಿ ರೈತರು ಹಾಗೂ ಕೃಷಿ ಉಳಿದಲ್ಲಿ ಮಾತ್ರ ದೇಶ ಉಳಿಯಲು ಸಾಧ್ಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಕೃಷಿ ಇಲಾಖೆ ಸಕಲೇಶಪುರ ಇವರ ವತಿಯಿಂದ 2025-26ನೇ ಸಾಲಿನ ರಾಷ್ಟ್ರೀಯ ಸುಸ್ಥಿರ ಕೃಷಿ ಮಿಷನ್ (ಮಳೆಯಾಶ್ರಿತ ಪ್ರದೇಶಾಭಿವೃದ್ಧಿ) ಯೋಜನಾ ವ್ಯಾಪ್ತಿಯಲ್ಲಿ ಕುರುಭತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡುಗೆರೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ”ಅರಿವು ಮೂಡಿಸುವ ಸಭೆ ಮತ್ತು ಸಮೂಹ ಆರೈಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತ ಒಂದು ಕೃಷಿ ಪ್ರಧಾನ ರಾಷ್ಟ್ರ ಆಗಿದ್ದು ಆದರೆ ಇತ್ತೀಚಿನ ದಿನಗಳಲ್ಲಿ ರೈತರ ಸಂಖ್ಯೆ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಇವತ್ತು ದೇಶದಲ್ಲಿ ಗೋವುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆಧುನಿಕ ಜೀವನ ಶೈಲಿಯಲ್ಲಿ ಎಲ್ಲರಿಗೂ ಗೋವುಗಳನ್ನು ಸಾಕಲು ಸಾಧ್ಯವಾಗುತ್ತಿಲ್ಲ ಗ್ರಾಮಾಂತರ ಪ್ರದೇಶಗಳಲ್ಲಿ ಮಾತ್ರ ಕೆಲವೇ ಕೆಲವು ರೈತರು ಗೋವುಗಳನ್ನು ಸಾಕುತ್ತಿದ್ದಾರೆ.
ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಸಹ ಮಾಡಬೇಕು. ಗೋವುಗಳನ್ನು ಸಾಕಿದರೆ ಮನೆಗೆ ಹಾಲು ದೊರಕುತ್ತದೆ ಹಾಗೂ ಡೈರಿಗೆ ಸಹ ಹಾಲನ್ನು ಹಾಕಬಹುದು ಮತ್ತು ಜಮೀನುಗಳಿಗೆ ಗೊಬ್ಬರ ಸಹ ದೊರೆಯುತ್ತದೆ. ಹೈನುಗಾರಿಕೆಯಿಂದ ರೈತರಿಗೆ ಹೆಚ್ಚಿನ ಲಾಭವಿದೆ. ರೈತರು ಈ ದೇಶದ ಬೆನ್ನೆಲುಬು ಹೀಗಾಗಿ ಸರ್ಕಾರಿ ಅಧಿಕಾರಿಗಳು ಸರ್ಕಾರ ನೀಡುವ ಸವಲತ್ತುಗಳನ್ನು ಸರಿಯಾಗಿ ತಲುಪಿಸಬೇಕು ಎಂದರು.
ಕೃಷಿ ಅಧಿಕಾರಿ ಪ್ರಕಾಶ್ ಮಾತನಾಡಿ, ಕುರುಭತ್ತೂರು ಹಾಗೂ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿಗಳನ್ನು ಮಳೆ ಆಶ್ರಿತ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ಸೇರ್ಪಡೆಯಾಗಿದ್ದು ಇದು ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಈ ಯೋಜನೆಯಡಿ ಹಸು ಮತ್ತು ಮೇಕೆ ಖರೀದಿ ಮಾಡಲು ಫಲಾನುಭವಿಗಳಿಗೆ ಸರ್ಕಾರದ ಸಹಾಯಧನದ 30000/- ರೂ ಚೆಕ್ ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.
ಸಂದರ್ಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
MLA Cement Manju said that the country can only survive if farmers and agriculture remain in the country.










