ಹಾಸನ : ಆಯುರ್ವೇದಿಕ್ ಉತ್ಪನ್ನಗಳು ಮನುಷ್ಯನ ಆರೋಗ್ಯ ರಕ್ಷಣೆಗೆ ವರದಾನ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.
ನಗರದ ಚನ್ನಪಟ್ಟಣ ಕೆ.ಎಚ್.ಬಿ ಲೇಔಟ್ ನಲ್ಲಿ ನೂತನವಾಗಿ ಆರಂಭವಾಗಿರುವ ಮೈ ಎಸ್.ಎಂ ವೆಲ್ನೆಸ್ ಕೇರ್ ನ ನೂತನ ಕಚೇರಿ ಉದ್ಘಾಟನೆ ನೆರವೇರಿಸಿ ಬಳಿಕ ಅವರು ಮಾತನಾಡಿ, ಇತ್ತೀಚೆಗೆ ಬದಲಾದ ಆಹಾರ ಪದ್ಧತಿ ಹಾಗೂ ಬದಲಾದ ಜೀವನ ಶೈಲಿಯಿಂದ ಮನುಷ್ಯನ ಆರೋಗ್ಯ ದಿನೇ ದಿನೇ ಹಾಳಾಗುತ್ತಿದೆ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಆಯುರ್ವೇದ ಉತ್ಪನ್ನಗಳನ್ನು ಬಳಸುವುದು ಒಳಿತು ಎಂದು ಕರೆ ನೀಡಿದರು.
ರೋಗ ಮುಕ್ತ ಭಾರತ ನಿರ್ಮಾಣಕ್ಕೆ ಸಂಸ್ಥೆ ಕೆಲಸ ಮಾಡುತ್ತಿದ್ದು ಇದಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ, ಆರೋಗ್ಯ ಸಮಸ್ಯೆ ಉಲ್ಬಣಗೊಳ್ಳುವ ಮೊದಲೇ ಎಚ್ಚೆತ್ತುಕೊಂಡು ಆಯುರ್ವೇದ ಉತ್ಪನ್ನಗಳ ಬಳಕೆ ಮಾಡುವುದು ಸೂಕ್ತ. ಇದರ ಜೊತೆ ಸಂಸ್ಥೆಯಲ್ಲಿರುವ ಆಯುರ್ವೇದ ಉತ್ಪನ್ನಗಳನ್ನು ಬಳಕೆಮಾಡಿದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಹಾಸನದಲ್ಲಿ ಈ ಸಂಸ್ಥೆ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡಿ ಒಳ್ಳೆಯ ಹೆಸರು ಗಳಿಸಿದ್ದು ಮುಂದಿನ ದಿನಗಳಲ್ಲಿಯೂ ಜನರ ಹಿತಕ್ಕಾಗಿ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು.
ಬಿಪಿ, ಶುಗರ್, ಅಧಿಕ ಬೊಜ್ಜು, ಹೀಗೆ ನಾನಾ ರೀತಿಯ ಖಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಜನರಿಗೆ ಬಳುವಳಿಯಾಗಿ ಬಂದಿವೆ. ಇಂತಹ ಎಲ್ಲಾ ಸಮಸ್ಯೆಗಳಿಗೆ ಕಡಿವಾಣ ಹಾಕಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಿರುವ ಎಂ.ಎಸ್ ವೆಲ್ನೆಸ್ ಕೇರ್ ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಯೂಸೀಫ್, ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ರಫೀಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಹ್ಯದ್ ಖಲಂದರ್, ನಿರ್ದೇಶಕ ಹಾಜಿ, ಇತರರಿದ್ದರು.
MP Shreyas Patel said that Ayurvedic products are a boon for human health.










