ಹಾಸನ: ನಗರದ ಸ್ಕಾಲರ್ಸ್ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಎಥ್ನಿಕ್ ಡೇ (ಸಾಂಪ್ರದಾಯಿಕ ದಿನ)ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ವಿವಿಧ ಸಾಂಪ್ರದಾಯಿಕ ಉಡುಗೆ–ತೊಡುಗೆ ಧರಿಸಿ ಆಗಮಿಸಿದ ವಿದ್ಯಾರ್ಥಿಗಳು, ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಂಪ್ರದಾಯ ಮತ್ತು ವೈವಿಧ್ಯತೆಯನ್ನು ಅರ್ಥಪೂರ್ಣವಾಗಿ ಸಂಭ್ರಮಿಸಿದರು.
ಈ ದಿನವು ವಿವಿಧ ಸಂಸ್ಕೃತಿಗಳನ್ನು ಗೌರವಿಸುವುದರ ಜತೆಗೆ, ಭಾರತ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ದೇಶ ಎಂಬ ಸಂದೇಶವನ್ನು ಸಾರುವ ವೇದಿಕೆಯಾಗಿತ್ತು.
ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ, ತಮ್ಮ ನೃತ್ಯ ಹಾಗೂ ಪ್ರದರ್ಶನಗಳ ಮೂಲಕ ಸಾಂಸ್ಕೃತಿಕ ಪರಂಪರೆಯ ಮೇಲಿನ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸಿದರು.
ಸಂಪ್ರದಾಯಗಳನ್ನು ಮರೆಯದೆ ವೈವಿಧ್ಯತೆಯಲ್ಲಿ ಏಕತೆ ಎಂಬ ಸಂದೇಶವನ್ನು ಅವರು ಎಲ್ಲರಿಗೂ ತಲುಪಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಆಡಳಿತಾಧಿಕಾರಿ ಡಾ. ಎಚ್. ಎನ್. ಚಂದ್ರಶೇಖರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ನಾಡು–ನುಡಿ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಎಂದಿಗೂ ಮರೆಯಬಾರದು ಎಂದು ಸಲಹೆ ನೀಡಿದರು.
ಭಾರತೀಯ ಸಂಸ್ಕೃತಿಯ ವೈಭವವನ್ನು ಅರಿತು ಮುಂದಿನ ತಲೆಮಾರಿಗೆ ಅದನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ವಿದ್ಯಾರ್ಥಿಗಳ ಮೇಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಮಮತಾ ಚಂದ್ರಶೇಖರ್ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳೊಂದಿಗೆ ಎಥ್ನಿಕ್ ಡೇ ಸಂಭ್ರಮದಲ್ಲಿ ಪಾಲ್ಗೊಂಡರು.
Ethnic Day was celebrated with great enthusiasm as part of the Makar Sankranti festival at Scholars School, Hassan City.










