ಚನ್ನರಾಯಪಟ್ಟಣ: ಕರ್ನಾಟಕ ರಾಜ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಸದಸ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಕ್ಷೇತ್ರದಿಂದ ತಾಲ್ಲೂಕಿನ ತೋಟಿ ಗ್ರಾಮದ ಕೆ.ಎಂ.ಜಯರಾಮ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಚುನಾವಣೆ ಪ್ರಕ್ರಿಯೆಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಕಳೆದ 20 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದು ಕ್ಷೇತ್ರ ವ್ಯಾಪ್ತಿಯ ರೈತರ ಏಳಿಗೆಗೆ ಶ್ರಮಿಸಿದ್ದಾರೆ.
ಅವಿರೋಧವಾಗಿ ಆಯ್ಕೆಯಾದ ಕೆ.ಎಂ.ಜಯರಾಮ್ ಅವರನ್ನು ಶಾಸಕರಾದ ಸಿ.ಎನ್.ಬಾಲಕೃಷ್ಣ ಅವರು ಹಾಗೂ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.










