ಬೆಂಗಳೂರು: ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಶಾಸಕ ಜನಾರ್ದನ ರೆಡ್ಡಿ ಅವರಿಗೆ ರಾಜಕೀಯ ಜೀವನದಲ್ಲಿ ಚಮಚಾಗಿರಿ ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಇಲ್ಲ ಎಂದು ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಲೇವಡಿ ಮಾಡಿದ್ದಾರೆ.
ತಲೆ ಮೇಲೆ ಕೈ ಇರಿಸಿಕೊಂಡಿದ್ದು ಸಾಲದೆಂಬಂತೆ ಕೇಂದ್ರದ ಮಾಜಿ ಸಚಿವೆ ಸುಷಾ ಸ್ವರಾಜ್ ಅವರ ಪಾದ ಪೂಜೆ ಮಾಡಿ ನೀರು ಕುಡಿದು ರಾಜಕೀಯ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಪಾದ ಪೂಜೆಯ ನೀರು ನೆತ್ತಿಗೇರಿರಬೇಕು. ಅದಕ್ಕೆ ಅಮಿತ್ ಶಾ ತಲೆ ಮೇಲೆ ಕುಟ್ಟಿ ಬಿಜೆಪಿಗೂ ಈ ಜೈಲುವಾಸಿ ರೆಡ್ಡಿಗೂ ಸಂಬಂಧ ಇಲ್ಲ ಅಂತಾ ಬಹಿರಂಗವಾಗಿ ಹೇಳಿದ್ದನ್ನು ಮರೆತಂತಿದೆ ಎಂದು ತಿರುಗೇಟು ನೀಡಿದ್ದಾರೆ.
ಜೈಲಲ್ಲಿ ತಟ್ಟೆ, ಲೋಟ, ಚಮಚಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಜನಾರ್ದನ ರೆಡ್ಡಿಗೆ ರಾಜಕೀಯ ಜೀವನದಲ್ಲಿ “ಚಮಚಾಗಿರಿ” ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ.
ತಲೆ ಮೇಲೆ ಕೈ ಇರಿಸಿಕೊಂಡಿದ್ದು ಸಾಲದೆಂಬಂತೆ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಪಾದ ಪೂಜೆ ಮಾಡಿ ನೀರು ಕುಡಿದು ರಾಜಕೀಯ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಪಾದ ಪೂಜೆಯ ನೀರು ನೆತ್ತಿಗೇರಿರಬೇಕು. ಅದಕ್ಕೆ ಅಮಿತ್ ಶಾ ತಲೆ ಮೇಲೆ ಕುಟ್ಟಿ ಬಿಜೆಪಿಗೂ ಈ ಜೈಲುವಾಸಿ ರೆಡ್ಡಿಗೂ ಸಂಬಂಧ ಇಲ್ಲ ಅಂತಾ ಬಹಿರಂಗವಾಗಿ ತುಪಕ್ ಅಂತಾ ಉಗ್ದಿದ್ದನ್ನು ಮರೆತಂತಿದೆ.
ಒಮ್ಮೆ ಜೀವದ ಗೆಳೆಯ ಅನ್ನೋದು, ಇನ್ನೊಮ್ಮೆಶ್ರೀ ರಾಮುಲು ವಿರುದ್ದವೇ ಮಸಲತ್ತು ಮಾಡುವ ಜನಾರ್ಧನ ರೆಡ್ಡಿಯ ಊಸರವಳ್ಳಿ ಆಟ ರಾಜ್ಯದ ಜನ ಮರೆತಿಲ್ಲ. ಸಹೋದರರನ್ನೇ ರಾಜಕೀಯವಾಗಿ ಮುಗಿಸಲು ಹೊರಟ ಜನಾರ್ಧನ ರೆಡ್ಡಿಯ ಮೂರು ಕಾಸಿಗೂ ಕಿಮ್ಮತ್ತಿಲ್ಲದ ತಂತ್ರಗಾರಿಕೆ ಬಗ್ಗೆ ಶ್ರೀರಾಮುಲು ಆಡಿರುವ ಒಂದೊಂದು ಆಣಿಮುತ್ತುಗಳೇ ಸಾಕು ಸಾಧ್ಯವಾದ್ರೆ ಎಣಿಸಿಕೊಳ್ಳಲಿ.
Congress Legislative Council member B.K. Hariprasad has joked that MLA Janardhana Reddy, who has seen no other world except for plates, glasses, and spoons in prison, has no knowledge of any other world in political life except being a spoon.










