ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ದ : ಎಚ್.ಪಿ.ಸ್ವರೂಪ್ ಪ್ರಕಾಶ್

ಹಾಸನ: ಮುಂಬರುವ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಪಿ.ಸ್ಟರೂನ್ ಪ್ರಕಾಶ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಭೂವನಹಳ್ಳಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಜನತಾ ಸಮೇಶದಲ್ಲಿ ಮಾತನಾಡಿದ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ಹಾಸನ ಜಿಲ್ಲೆ ಅಭಿವೃದ್ಧಿ ಕಾಣುತ್ತಿರುವುದಕ್ಕೆ ಜೆಡಿಎಸ್ ಕಾರಣ, ಹಾಸನವಿಧಾನ ಸಭಾ ಕ್ಷೇತ್ರದದಲ್ಲಿ ಶಾಶ್ವತ ಅಭಿವೃದ್ಧಿ ಕೆಲಸ ಆಗಿರುವುದು ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಸರ್ಕಾರ ಇಂಜಿನಿಯರಿಂಗ್ ಕಾಲೇಜು, ಬಸ್ ನಿಲ್ದಾಣ, ಕೋರ್ಟ್, ಮಹಿಳಾ ಕಾಲೇಜುಗಳು, ಹಾಸ್ಟೆಲ್, ಸೇರಿದಂತೆ ಹಲವಾರು ಶಾಶ್ ಅವತ ಭಿವೃದ್ಧಿ ಕಾಗಾಮರಿಗಳನ್ನು ಮಾಡಿದ್ದಾರೆ.

ಹಾಸನ ಜಿಲ್ಲೆಗೆ ಕಾಂಗ್ರೆಸ್ ಸರ್ಕಾರದ ಕೊಡುಗೆ ಶೂನ್ಯ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ತುಂಬುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಜಿಲ್ಲೆಗೆ ಯಾವುದೇ ಕೊಡುಗೆ ನೀಡಿಲ್ಲ. ಆದರೂ ಜಿಲ್ಲೆಯಲ್ಲಿ ಎರಡು ಸಮಾವೇಶ ಮಾಡಿರುವುದು ಯಾವ ಪುರುಷಾರ್ಥಕ್ಕೆ ಎಂಬುದನ್ನು ಅವರೇ ಹೇಳಬೇಕು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಮತ್ತಿರರು ಹಾಜರಿದ್ದರು.