🔴 ಬ್ರೇಕಿಂಗ್ ನ್ಯೂಸ್ | Hassanಹಾಸನ
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
👤 ಮೃತರು ಯಾರು?
ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೀರಪ್ಪ (58) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
⚔️ ಆಸ್ತಿ ಕಲಹವೇ ಹತ್ಯೆಗೆ ಕಾರಣ?
ಕುಟುಂಬ ಸದಸ್ಯರ ಪ್ರಕಾರ, ದಾಯಾದಿಗಳ ನಡುವೆ ಆಸ್ತಿ ವಿವಾದ ನಡೆಯುತ್ತಿದ್ದು, ಇದೇ ಕಾರಣಕ್ಕೆ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ನಿನ್ನೆ ಆಲೂರಿನಲ್ಲಿ ಕೋರ್ಟ್ ವಿಚಾರಣೆ ಹಾಜರಾಗಿ ಬಳಿಕ ತಮ್ಮ ಜಮೀನಿನ ಕಡೆಗೆ ಬಂದಿದ್ದ ವೀರಪ್ಪ ಅವರನ್ನು ದುಷ್ಕರ್ಮಿಗಳು ಹಿಂಬಾಲಿಸಿ ಹಲ್ಲೆ ನಡೆಸಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
🔥 ಸುಟ್ಟು ಕರಕಲಾದ ಮೃತದೇಹ
ಘಟನೆಯ ನಂತರ ವೀರಪ್ಪ ಅವರ ಮೃತದೇಹ ಸಂಪೂರ್ಣವಾಗಿ ಸುಟ್ಟು ಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
👮♀️ ಪೊಲೀಸ್ ತನಿಖೆ ಆರಂಭ
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕಿ Shubhanvita IPS ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣವು Alur Police Station ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.










