ಹಾಸನ : ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಫೆ.27 ರಂದು ಹೊಳೆನರಸೀಪುರ ಪಟ್ಟಣದ ಪಾರ್ಕ್ ಸಮೀಪದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಕವಿಯಿತ್ರಿ ಹಾಗೂ ಶಿಕ್ಷಕಿ ಸುಧಾ ವಿಶ್ವನಾಥ್ ವಿರಚಿತ ಮನೋನ್ಮನೈ ಕವನ ಸಂಕಲನ ಲೋಕಾರ್ಪಣೆಗೊಳ್ಳಲಿದೆ ಎಂದು ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬಾ.ನಂ ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತಿಯಲ್ಲಿ ಯಶಸ್ವಿ ಸರ್ಕಾರಿ ವೃತ್ತಿ ಶಿಕ್ಷಕಿಯಾಗಿ ಸುಧೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾಗುತ್ತಿರುವ ಈ ಶುಭ ಸಂದರ್ಭದಲ್ಲಿ ಇವರ ಕವನ ಸಂಕಲನ ಲೋಕಾರ್ಪಣೆಗೊಳ್ಳುತ್ತಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಹೊಳೆನರಸೀಪುರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಎನ್ ಸೋಮಲಿಂಗೇಗೌಡ ನೆರವೇರಿಸುವರು. ಮುಖ್ಯ ಶಿಕ್ಷಕಿ ಸವಿತಾ ಎಂ ಎನ್ ಅಧ್ಯಕ್ಷತೆ ವಹಿಸುವರು. ಲೇಖಕಿ ಸುಧಾ ವಿಶ್ವನಾಥ್ ರವರಿಗೆ ನಾಗರೀಕ ಸನ್ಮಾನ ಮಾಡಲಾಗುವುದು.
ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬಾ ನಂ ಲೋಕೇಶ್ ಅವರು ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ. ಹೊಳೆನರಸೀಪುರ ತಾಲ್ಲೂಕು ಚುಸಾಪ ಅಧ್ಯಕ್ಷೆ ಪ್ರೇಮ ಮಂಜುನಾಥ್, ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ ಕೆ ವಸಂತಯ್ಯ, ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್ ಬಿ ವೆಂಕಟೇಶ್, ಶಿಕ್ಷಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪೋಷಕರು ಹಾಜರಿರಲಿದ್ದಾರೆ ಎಂದು ತಿಳಿಸಿದ್ದಾರೆ.
On this auspicious occasion of her retirement after a long career as a successful government teacher, her poetry collection is being released.










