Hassan: video-ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಎಗರಿ ಬಂದು ಸ್ವಿಫ್ಟ್ ಗೆ ಅಪ್ಪಳಿದ ಓಮ್ನಿ: ಕಾರುಗಳು ಛಿದ್ರ ಛಿದ್ರ!

Hassan|ಹಾಸನ:(kannadapost.com) ಸಮೀಪದ ಮಾವನೂರು ಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಸಕಲೇಶಪುರ ಕಡೆಯಿಂದ ಬರುತ್ತಿದ್ದ ಕೆಂಪು ಬಣ್ಣದ ಓಮ್ನಿ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಮೂರ್ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಕ್ಷಣಕ್ಕೆ ಸ್ಥಳಕ್ಕೆ ಅಂಬುಲೆನ್ಸ್ ಗಳು ಧಾವಿಸಿ ಗಾಯಾಗಳುಗಳನ್ನು ಆಸ್ಪತ್ರೆಗೆ ಸಾಗಿಸಿವೆ. ಅಪಘಾತದ ತೀವ್ರತೆಗೆ ಓಮ್ನಿ ವ್ಯಾನ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.