Hassan: ಹಾಸನದಲ್ಲಿ ಕಾರು-ಟ್ಯಾಂಕರ್ ಡಿಕ್ಕಿ: ಡೀಸೆಲ್ ಸೋರಿಕೆ ತಡೆದ ಅಗ್ನಿಶಾಮಕ ದಳ

Hassan|ಹಾಸನ: ನಗರದ ಬಿಎಂ ರಸ್ತೆಯಲ್ಲಿ ಇಂದು ಮುಂಜಾನೆ ಡಿಸೇಲ್ ಟ್ಯಾಂಕರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ರಸ್ತೆ ಬದಿಗೆ ಸರಿದು ನಿಂತಿದೆ. ಅಪಘಾತದ ಬಳಿಕ ಟ್ಯಾಂಕರ್‌ನಲ್ಲಿ ಸಣ್ಣ ಪ್ರಮಾಣದಲ್ಲಿ ಡಿಸೇಲ್ ಸೋರಿಕೆ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಡಿಸೇಲ್ ಸೋರಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.