ಹಾಸನ: ಮುಂದಿನ ತಿಂಗಳು 2 ರಿಂದ ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭವಾಗಲಿದ್ದು, ಕೆಲವೇ ದಿನಗಳಲ್ಲಿ ಸಿದ್ಧತಾ ಕಾರ್ಯಗಳು ಪೂರ್ಣಗೊಳ್ಳಲಿವೆ ಎಂದು ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್ ತಿಳಿಸಿದರು.
ಇಂದು ಉಪ ವಿಭಾಗಾಧಿಕಾರಿ ಹಾಗೂ ಅಧಿಕಾರಿಗಳ ಜೊತೆ ದೇವಾಲಯಕ್ಕೆ ಭೇಟಿ ಜಾತ್ರಾ ಮಹೋತ್ಸವದ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ಮಾತನಾಡಿದರು.
ಇದೇ ವೇಳೆ ಹಾಸನಾಂಬ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆಗೆ ಅರ್ಚಕರು ಪೂಜೆ ನೆರವೇರಿಸಿದರು. ಇಂದಿನಿoದಲೇ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಿ ಅವರನ್ನು ಸ್ವಾಗತಿಸುವ ಕಾರ್ಯ ಶುರುವಾಗಲಿದೆ. ನ. ೨ ರಿಂದ ನ.೧೫ ರವರೆಗೆ ಈ ಬಾರಿಯ ಜಾತ್ರಾ ಮಹೋತ್ಸವ ನಡೆಯಲಿದೆ.
ತೊಂದರೆ ಆಗದಂತೆ ಕ್ರಮ: ಈ ಬಾರಿ ರಾಜ್ಯದಲ್ಲಿ ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸುವ ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ, ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರು ಅದರಕ್ಕೂ ಮಹಿಳೆಯರು ಹೆಚ್ಚಾಗುವ ಸಾಧ್ಯತೆ ಇದೆ.
ಬರುವ ಭಕ್ತಾದಿಗಳಿಗೆ ೨೪ ಗಂಟೆ ದೇವಿ ದರ್ಶನ ಹಾಗೂ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ದೇವಾಲಯದ ಒಳ ಹೊರಗೆ ಪೇಂಟ್ ಕಾರ್ಯ ಮುಗಿದಿದ್ದು, ಉಳಿದ ಕೆಲಸಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸ್ವರೂಪ್‌ಪ್ರಕಾಶ್ ತಿಳಿಸಿದರು.
ಅನುದಾನ ನೀಡದ್ದಕ್ಕೆ ಅಸಮಾಧಾನ:
ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಂದ ಅನೇಕ ಅಭಿವೃದ್ಧಿ ಯೋಜನೆ ಕುಂಠಿತ ಗೊಂಡಿವೆ ಎಂದ ಅವರು, ಅಭಿವೃದ್ಧಿಗೆ ಅನುದಾನ ನೀಡದೇ ಇರುವುದಕ್ಕೆ ತೀವ್ರ ಅಸಮಾಧಾನ ಹೊರ ಹಾಕಿದರು.
ನ.೨ ರಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆಯಲಿದೆ. ಇದಕ್ಕೂ ಮುಂಚೆಯೇ ಬಹು ನಿರೀಕ್ಷಿತ ಹಾಸನದ ಫ್ಕೆಓವರ್ ಉದ್ಘಾಟನೆ ಆಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೀಗ ಅದು ನಿರೀಕ್ಷೆ ಹುಸಿಯಾಗಿದೆ, ಅಭಿವೃದ್ಧಿ ಬಹಳ ಕುಂಠಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ವಿವಿಧ ಕಾಮಗಾರಿಗಳಿಗೆ ಹಾಗೂ ಇಲಾಖೆಗೆ ಅನುದಾನ ಕೊಡುವುದು ಕಡಿಮೆಯಾಗಿದೆ. ನಾನು ಸಂಬoಧಪಟ್ಟ ಸಚಿವರನ್ನು ಭೇಟಿ ಮಾಡಿದ್ದೇನೆ.
ಅಭಿವೃದ್ಧಿ ವಿಚಾರವಾಗಿ ಸಚಿವರನ್ನು ಭೇಟಿ ಮಾಡಿದ್ದು, ಅವರು ಸದ್ಯ ಯಾವುದೇ ಹಣ ಇಲ್ಲಾ ಎಂದು ಹೇಳುತ್ತಿದ್ದಾರೆ ಎಂದರು.
ಶಾಸಕರ ನಿಧಿ ಐವತ್ತು ಲಕ್ಷ ಬಂದಿದೆ ಎಂದು ಹೇಳುತ್ತಿದ್ದಾರೆ, ಆದರೆ ಕೂಡ ಅದು ಬಂದಿಲ್ಲ. ಲೋಕಸಭಾ ಚುನಾವಣೆ ಗುರಿಯಾಗಿಟ್ಟುಕೊಂಡು ಐದು ಗ್ಯಾರಂಟಿಗಳ ಹೆಸರಿನಲ್ಲಿ ಜನಗಳ ಕಣ್ಣೊರೆಸುವ ತಂತ್ರ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಗ್ಯಾರಂಟಿಗಳಿoದ ಅಭಿವೃದ್ಧಿಯಲ್ಲಿ ಬಹಳಷ್ಟು ಹಿಂದೆ ಉಳಿದಿದ್ದೇವೆ. ಮುಂದಿನ ದಿನಗಳಲ್ಲಿ ಅಧಿವೇಶನ ಸಂದರ್ಭದಲ್ಲಿ ಮತ್ತೊಮ್ಮೆ ಸಚಿವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ನುಡಿದರು.
ಹಬ್ಬ ಕಳೆದುಕೊಂಡು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ನೇತೃತ್ವದಲ್ಲಿ ಎಲ್ಲ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.










