ಹಾಸನ: ರಸ್ತೆ ದಾಟುತ್ತಿದ್ದ ವಯೋವೃದ್ಧೆಗೆ ಆಕ್ಟೀವ್ ಹೊಂಡಾ ಬೈಕಲ್ಲಿ ಯುವಕ
ಡಿಕ್ಕಿ ಹೊಡೆದು ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ೮೨ ವರ್ಷ ನಿಂಗಾಜಮ್ಮ ಎಂಬ ಅಜ್ಜಿ, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ನಗರದ ಹೊಸಲೈನ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಿಂಗಜಮ್ಮ ಆ?ಯಕ್ವಿವ್ ಹೋಂಡಾ ವಾಹನದಲ್ಲಿ ಬಂದ ಯುವಕ ನಿಂಗಾಜಮ್ಮ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕಲ್ಲಿ ಯುವಕ ಅಜಾಗರೂಕತೆಯಿಂದ ಚಾಲನೆ ಮಾಡಿ, ಡಿಕ್ಕಿ ಹೊಡೆದು ಬೈಕ್ ನಿಲ್ಲಿಸದೆ ಪರಾರಿಯಾಗಿದ್ದಾನೆ.
ಡಿಕ್ಕಿ ನಂತರ ಕುಸಿದು ಬಿದ್ದ ಅಜ್ಜಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತೀವ್ರವಾಗಿ ಗಾಯಗೊಂಡಿರುವ ನಿಂಗಾಜಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅಲ್ಲೂ ಪರಿಸ್ಥಿತಿ ವಿಷಮಿಸಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲು ಮಾಡಿದ್ದರು.
ಆದರೆ ಅಲ್ಲೂ ಕೂಡ ಚಿಕಿತ್ಸೆಗೆ ನಿಂಗಾಜಮ್ಮ ಸ್ಪಂದಿಸದ ಕಾರಣ ಮನೆಗೆ ವಾಪಸ್ ಕರೆದುಕೊಂಡು ಬಂದಿದ್ದಾರೆ. ಈ ಸಂಬAಧ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿದವನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.









