13.2 C
Munich
Home News Hassan:ಹಾಸನ:ಹಾಸನ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಮಲ್ನಾಡ್ ಫೆಸ್ಟ್ 2026’ ಸಂಭ್ರಮ:

Hassan:ಹಾಸನ:ಹಾಸನ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಮಲ್ನಾಡ್ ಫೆಸ್ಟ್ 2026’ ಸಂಭ್ರಮ:

ಹಾಸನ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಲ್ನಾಡ್ ಫೆಸ್ಟ್ 2026 ಸಂಭ್ರಮ | AIML-CSBSಗೆ ಪ್ರಥಮ ಬಹುಮಾನ

ಹಾಸನದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮಲ್ನಾಡ್ ಫೆಸ್ಟ್ 2026 ಕಾರ್ಯಕ್ರಮದಲ್ಲಿ ಟ್ರೋಫಿ ಗೆದ್ದು ಸಂಭ್ರಮಿಸುತ್ತಿರುವ ವಿದ್ಯಾರ್ಥಿಗಳು.
ಮಲ್ನಾಡ್ ಫೆಸ್ಟ್ 2026ರಲ್ಲಿ AIML ಹಾಗೂ CSBS ವಿಭಾಗಕ್ಕೆ ಪ್ರಥಮ ಸ್ಥಾನ; ವಿದ್ಯಾರ್ಥಿಗಳ ಸಂಭ್ರಮಕ್ಕೆ ಸಾಕ್ಷಿಯಾದ ಮಲೆನಾಡು ಇಂಜಿನಿಯರಿಂಗ್ ಕಾಲೇಜು.

ಹಾಸನದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆದ ಮಲ್ನಾಡ್ ಫೆಸ್ಟ್ 2026 ಯಶಸ್ವಿಯಾಗಿ ಸಮಾಪ್ತಿಯಾಯಿತು. AIML ಹಾಗೂ CSBS ವಿಭಾಗಗಳು ಪ್ರಥಮ ಬಹುಮಾನ ಪಡೆದು ಸಂಭ್ರಮಾಚರಣೆ ನಡೆಸಿದವು.

ಹಾಸನ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಮಲ್ನಾಡ್ ಫೆಸ್ಟ್ 2026’ ಯಶಸ್ವಿ

ಹಾಸನ,ಮೇ,11,2026(www.kannadapost.com):ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 8ರಿಂದ ಮೇ 10, 2026ರವರೆಗೆ ಮೂರು ದಿನಗಳ ಕಾಲ ನಡೆದ ‘ಮಲ್ನಾಡ್ ಫೆಸ್ಟ್ 2026’ ವೈಭವದಿಂದ ನಡೆಯಿತು. ಕಾಲೇಜಿನ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಸಾಂಸ್ಕೃತಿಕ, ಕ್ರೀಡಾ ಹಾಗೂ ವಿವಿಧ ಕಲಾತ್ಮಕ ಚಟುವಟಿಕೆಗಳ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಡ್ಯಾನ್ಸ್, ಸಂಗೀತ, ಕ್ರೀಡೆ ಸೇರಿದಂತೆ ವಿವಿಧ ಪ್ರತಿಭಾ ಪ್ರದರ್ಶನಗಳನ್ನು ನೀಡಿದರು. ಕಾಲೇಜು ಆವರಣವನ್ನು ತೋರಣಗಳು, ಕಲಾಕೃತಿಗಳು ಹಾಗೂ ಆಕರ್ಷಕ ಅಲಂಕಾರಗಳಿಂದ ಸಿಂಗರಿಸಲಾಗಿತ್ತು. ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದರು.

AIML ಹಾಗೂ CSBS ವಿಭಾಗಕ್ಕೆ ಪ್ರಥಮ ಸ್ಥಾನ

ಮಲ್ನಾಡ್ ಫೆಸ್ಟ್ 2026ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಎ.ಐ.ಎಂ.ಎಲ್ (AIML) ಹಾಗೂ ಸಿ.ಎಸ್.ಬಿ.ಎಸ್ (CSBS) ವಿಭಾಗದ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದು

 

 

 ಟ್ರೋಫಿ ಸ್ವೀಕರಿಸಿ ಸಂಭ್ರಮಾಚರಣೆ ನಡೆಸಿದರು.

ಎರಡನೇ ಬಹುಮಾನವನ್ನು ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳು ಪಡೆದುಕೊಂಡರೆ, ಮೂರನೇ ಬಹುಮಾನವನ್ನು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡರು.

“ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿ”

ಮೇ 10ರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇ

ತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಮಲೆನಾಡು ಇಂಜಿನಿಯ

ರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್. ಜೆ. ಅಮರೇಂದ್ರ್, “ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡುತ್ತವೆ. ವ್ಯಾಸಂಗದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಕಲಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ” ಎಂದು ಹೇಳಿದರು.

ಪ್ರತಿ ವರ್ಷವೂ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆಯುವ ಈ ಉತ್ಸವ ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಮೂಡಿಸುತ್ತಿದೆ. ಹಿರಿಯ ವಿದ್ಯಾರ್ಥಿಗಳು, ವಿವಿಧ ಕ್ಲಬ್‌ಗಳು ಹಾಗೂ

ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಸಹಕಾರದಿಂದ ಕಾರ್ಯಕ್ರಮ ಯಶ

 

ಸ್ವಿಯಾಗುತ್ತಿದೆ ಎಂದು ಅವರು ತಿಳಿಸಿದರು.

 

ಹಲವರು ಭಾಗವಹಿಸಿದರು

 

 

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಇಂದಿರಾ ಬಹುದೂರ್, ಸಹ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಶಿವಶಂಕರ್, ಕಾರ್ಯಕ್ರಮ ಸಂಯೋಜಕರಾದ ಡಾ. ಮಾರ್ಗರೇಟ್, ಡಾ. ಜೀವನ್, ಡಾ. ಶರತ್ ಸೇರಿದಂತೆ ಹಲವು ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಈ ವಾರ್ಷಿಕೋತ್ಸವವನ್ನು ಕಾಲೇಜು ವತಿಯಿಂದ ಹಾಗೂ ಲಿಯೋ ಕ್ಲಬ್ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

error: Content is protected !!