Holenarasipura: ಹಾಸ್ಟೆಲ್‌ನ ಸ್ನಾನದ ಕೊಠಡಿಯಲ್ಲಿ ನೇಣಿಗೆ ಶರಣಾದ ಬಿಎಸ್ಸಿ ವಿದ್ಯಾರ್ಥಿನಿ

Holenarasipura|ಹೊಳೆನರಸೀಪುರ: ಪಟ್ಟಣದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತಿಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬಳು ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

​ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಶ್ರೀರಕ್ಷಾ (21 ವರ್ಷ) ಎಂದು ಗುರುತಿಸಲಾಗಿದೆ. ಈಕೆ ಮೈಸೂರು ಜಿಲ್ಲೆಯ ಚುಂಚನಕಟ್ಟೆ ಗ್ರಾಮದ ಬಸವೇಗೌಡ ಮತ್ತು ಸುವರ್ಣ ದಂಪತಿಯ ಪುತ್ರಿ.

ಶ್ರೀರಕ್ಷಾ ಹೊಳೆನರಸೀಪುರದ ಬಾಲಕಿಯರ ಹಾಸ್ಟೆಲ್ ನಲ್ಲಿದ್ದುಕೊಂಡು ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ತನ್ನ ಅಂತಿಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು.

​ಘಟನೆಯ ವಿವರ:
ವಿದ್ಯಾರ್ಥಿನಿ ಹಾಸ್ಟೆಲ್‌ನ ಸ್ನಾನದ ಕೊಠಡಿಗೆ ತೆರಳಿ, ಅಲ್ಲಿಯೇ ನೇಣುಬಿಗಿದುಕೊಂಡು ತನ್ನ ಸಾವಿಗೆ ಶರಣಾಗಿದ್ದಾಳೆ. ಆಕೆಯ ನಿರ್ಧಾರಕ್ಕೆ ನಿಖರವಾದ ಕಾರಣವೇನೆಂದು ತಿಳಿದುಬಂದಿಲ್ಲ.

​ ಮಾಹಿತಿ ತಿಳಿದ ತಕ್ಷಣ ಹೊಳೆನರಸೀಪುರ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿದ್ಯಾರ್ಥಿನಿಯ ಸಾವಿನ ಸುದ್ದಿ ಕೇಳಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.