14.9 C
Munich
Home News ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಂದರ್ಭ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಭಾರಿ ಭದ್ರತೆ ಮತ್ತು ಅಭಿಮಾನಿಗಳ ಸಂಭ್ರಮದ ನಡುವೆ ಭೇಟಿ ನೆರವೇರಿತು.

ಉಡುಪಿ, ಜೂನ್ 12, 2026(www.kannadapost.com): ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಿದ ಮುಖ್ಯಮಂತ್ರಿ ವಿಜಯ್ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧಿಕಾರಿಗಳು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಮಧ್ಯಾಹ್ನ ಸುಮಾರು 3:35 ಗಂಟೆಗೆ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಅವರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರದಲ್ಲಿ ಭಕ್ತರು ಹಾಗೂ ಅಭಿಮಾನಿಗಳ ದೊಡ್ಡ ಸಂಖ್ಯೆಯ ಜನಸ್ತೋಮ ಸೇರಿತ್ತು.

ದೇವಾಲಯದ ಹೊರಭಾಗದಲ್ಲಿ ನೆರೆದಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಮುಖ್ಯಮಂತ್ರಿ ವಿಜಯ್ ಅವರಿಗೆ ಝಡ್ ಪ್ಲಸ್ ಭದ್ರತೆ ಕಲ್ಪಿಸಲಾಗಿದ್ದರಿಂದ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು.

ಇನ್ನೊಂದೆಡೆ, ಭದ್ರತಾ ಕ್ರಮಗಳ ಹಿನ್ನೆಲೆ ಶುಕ್ರವಾರ ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಸಾಮಾನ್ಯ ದಿನಗಳಿಗಿಂತ ಕಡಿಮೆಯಾಗಿರುವುದು ಗಮನ ಸೆಳೆಯಿತು.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಜಯ್ ಅವರ ಆಗಮನ ಭಕ್ತರು ಮತ್ತು ಅಭಿಮಾನಿಗಳಲ್ಲಿ ವಿಶೇಷ ಕುತೂಹಲ ಮೂಡಿಸಿತು.

error: Content is protected !!